38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ ಕೂಡ ಅಳವಡಿಸಿಕೊಳ್ಳಿ, ಮಾದಕ ದ್ರವ್ಯಗಳಿಂದ ದೂರ ಇರಿ, ರುಡ್‌ಸೆಟ್ ಸಂಸ್ಥೆಯು ನಿಮಿಗೆ ವೃತ್ತಿ ಜೀವನದ ಜೊತೆಗೆ ಮೌಲ್ಯಾದಾರಿತ ಬದುಕನ್ನು ಕಲಿಸಿ ಕೊಟ್ಟಿದೆ, ಇದನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳುವ ಪ್ರಯತ್ನ ಮಾಡಿ ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯಪಟ್ಟರು.

ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಎಮ್. ಸುರೇಶ್‌ರವರು ಅಧ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕಿ ಶ್ರೀಮತಿ ಅನಸೂಯ ವಂದಿಸಿದರು. 30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 25 ಅಭ್ಯರ್ಥಿಗಳು ಭಾಗವಹಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Related posts

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಆಗ್ರಹಿಸಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ನಗರ ಪಂಚಾಯತ್ ಗೆ ಮನವಿ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya
error: Content is protected !!