April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿಗಳಿಂದ ಆಹಾರಮೇಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ರವರು ಆಹಾರ ಮೇಳದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಮುಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಬೇಕು ಮತ್ತು ಇಂತಹ ಕಾರ್ಯಕ್ರಮವನ್ನು ವಿದ್ಯಾರ್ಥಿ ಪೋಷಕರು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತಹ ಪುದುವೆಟ್ಟು ಗ್ರಾ.ಪಂ. ನಿಕಟ ಪೂರ್ವ ಅಧ್ಯಕ್ಷ ಯಶವಂತ ಗೌಡರವರು ಇಂತಹ ಆಹಾರ ಮೇಳವನ್ನು ಆಯೋಜನೆ ಮಾಡುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರದ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದಂತಾಗುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುದುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಅನಿತಾ ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಹೊರಗಿನ ಪ್ರಪಂಚದ ವ್ಯವಹಾರದ ಅರಿವು ತಿಳಿಯಬೇಕಾದರೆ ಇಂತಹ ಆಹಾರ ಮೇಳಗಳು ತುಂಬಾ ಮುಖ್ಯ ಎಂದು ಅಭಿಪ್ರಾಯಪಟ್ಟರು.

ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಪುದುವೆಟ್ಟು ಶಾಲೆಯಲ್ಲಿ ಇಂತಹ ವಿನೂತನ ಕಾರ್ಯಕ್ರಮಗಳು ನಡೆಯುತ್ತಿರುತದೆ ವಿದ್ಯಾರ್ಥಿಗಳು ಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಹಾರಮೇಳದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಹಿರಿಯ ಶಿಕ್ಷಕಿಯಾದ ಶ್ರೀಮತಿ ತೇಜಾವತಿಯವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳನ್ನು ಶಾಲೆಯ ಶಿಕ್ಷಕ ನಿಶಾಂತ್ ಕುಮಾರ್ ಸ್ವಾಗತಿಸಿ ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡರವರು ಧನ್ಯವಾದ ಸಲ್ಲಿಸಿದರು. ಶಾಲೆಯ ಎಲ್ಲ ಶಿಕ್ಷಕರು ಸಹಕರಿಸಿದರು.

Related posts

ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಚೈತನ್ಯ ರೈ ಬೆಳ್ತಂಗಡಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ತ್ರೋಬಾಲ್ ಪಂದ್ಯಾಟ: ಕರಂಬಾರು ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನೆರಿಯ ಹಿಂದೂ ರುದ್ರಭೂಮಿಗೆ ಪಂಚಾಯತ್ ಬಳಿ ಇರುವ ಕಂದಾಯ ಜಾಗವನ್ನು ಮೀಸಲಿರಿಸಿದ ತಹಶೀಲ್ದಾರರು: ಪ್ರತಿಭಟನೆ ಕೈಬಿಟ್ಟ ಗ್ರಾಮಸ್ಥರು

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!