24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

ಪುದುವೆಟ್ಟು ಗ್ರಾಮದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪುದುವೆಟ್ಟು ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನೀತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.28 ರಂದು ನಡೆಸಲಾಯಿತು.

ಸಭೆಯ ಮುಖ್ಯ ಅತಿಥಿಗಳಾಗಿ ಪಂಚಾಯತ್ ಉಪಾಧ್ಯಕ್ಷರಾದ ಪೂರ್ಣಾಕ್ಷ ಹಾಗೂ ಪಂಚಾಯತ್ ನ ಗೌರವಾನ್ವಿತ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎನ್.ಬಿ ಉಪಸ್ಥಿತರಿದ್ದರು.

ಗ್ರಾಮಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಿವಿದೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ಟಿಸ್ಟ್ ಡಿ ಸೋಜ ಉಪಸ್ಥಿತರಿದ್ದು ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಜಿರೆ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ವಿಪುಲ್ ಉಪಸ್ಥಿತರಾಗಿದ್ದರು. ಗ್ರಾಮ ಸಭೆಯಲ್ಲಿ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತೆಯಾದ


ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳು ಹಾಗೂ ಆಶಾ ಕಾರ್ಯಕರ್ತೆಯರು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸ್ವಾಗತಿಸಿದರು. ಶಮೀಮ ವಾರ್ಷಿಕ ವರದಿಯನ್ನು ಮಂಡಿಸಿ, ಧನ್ಯವಾದವಿತ್ತರು.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಯುವ ಇಂಜೀನಿಯರ್ ಕುತೂಬುದ್ದೀನ್ ಗೋಳಿಕಟ್ಟೆ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya
error: Content is protected !!