September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ.

ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು ಕೂಡಲೇ ಸ್ಥಳಿಯರಾದ ನಿತ್ಯಾನಂದ ಹೆಗ್ಡೆ ಮತ್ತು ರಮೇಶ್ ದೇವಾಡಿಗರವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಡಿಕ್ಕಿಯ ರಭಸಕ್ಕೆ ಮಹಿಳೆಗೆ ಕೈ,ಕಾಲು,ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಬೆಳ್ತಂಗಡಿ ಹಾಗೂ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ‌ ಆಸ್ಪತ್ರೆಗೆ ಸೇರಿಸಲಾಗಿದೆ.
ಈ ಸಂಬಂಧ ವೇಣೂರು ಪೋಲೀಸ್ ಠಾಣೆಯಲ್ಲಿ ಸುಶೀಲರವರು ದೂರು ನೀಡಿದ್ದು, ದೂರಿನಲ್ಲಿ ನಿರ್ಲಕ್ಷ್ಯತನದಿಂದ ಬೈಕ್ ಚಲಾಯುಸುತ್ತಿದ್ದ ವ್ಯಕ್ತಿಯನ್ನು ಜಾನ್ ಲೋಬೋ ಎಂದು ಗುರುತಿಸಲಾಗಿದೆ. ವಾಹನ ನಂಬ್ರ ಕೆಎ 21,ಯು 2946 ಆಗಿದೆ ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಜಾರಿಗೆ ಹೈಕೋರ್ಟ್ ತಡೆ

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya
error: Content is protected !!