25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬದಿನಡೆ ಪುಂಡಿಕಲ್ ಕುಕ್ಕು ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ,ಧಾರ್ಮಿಕ ಉಪನ್ಯಾಸ

Suddi Udaya
error: Content is protected !!