20.5 C
ಪುತ್ತೂರು, ಬೆಳ್ತಂಗಡಿ
November 25, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಫೆ.28 ರಂದು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗೆಗಿನ ಆಸಕ್ತಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಬೇಕು, ವಿಜ್ಞಾನದಿಂದ ಯಾವುದನ್ನು ಬೇಕಾದರೂ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ನೆರಿಯ ವಲಯದ ಪಶುವೈದ್ಯಾಧಿಕಾರಿ ಹಾಗೂ ಉಜಿರೆ ಪಂಚಾಯತ್ ನ ಆಡಳಿತ ಅಧಿಕಾರಿ ಡಾ| ಯತೀಶ್ ಗೌಡ ಮಠ ಶಾಲೆಯಲ್ಲಿ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದರು.


ಉದ್ಘಾಟನೆಗೊಳಿಸಿ ಮಾತನಾಡಿದ ಡಾ| ಯತೀಶ್ ಗೌಡ ಮಠ ರವರು ಇತ್ತೀಚಿನ ದಿನಗಳಲ್ಲಿ ವಿಜ್ಞಾನ ಬಹಳಷ್ಟು ಮುಂದುವರೆದಿದೆ, ಹಿಂದಿನ ಕಾಲದಲ್ಲಿ ಎಷ್ಟು ಕಷ್ಟಕರ ಕೆಲಸಗಳನ್ನು ಇವಾಗಿನ ವಿಜ್ಞಾನ ಬಹಳಷ್ಟು ಸುಲಭವಾಗಿ ಮಾಡುವಂತೆ ಮುಂದುವರೆದಿದೆ, ಈ ಶಾಲೆಯ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಕಂಡು ತುಂಬಾನೇ ಸಂತೋಷವಾಯಿತು, ಇದರ ಮುಂದುವರಿದ ಭಾಗವಾಗಿ ನೀವು ತಯಾರಿಸಿದ ಮಾದರಿಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ತೇಜಾವತಿಯವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳಿಂದ ತಯಾರಿಸಲ್ಪಟ್ಟ ಸುಮಾರು 25ಕ್ಕೂ ಹೆಚ್ಚು ವಿವಿಧ ಬಗೆಯ ವಿಜ್ಞಾನ ಮಾದರಿಗಳನ್ನು ಪ್ರದರ್ಶನಕ್ಕೀಡಲಾಯಿತು.


ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಶ್ರೀನಿಶಾಂತ್ ಕುಮಾರ್ ರವರು ಸ್ವಾಗತಿಸಿ, ಶಾಲೆಯ ಹಿರಿಯ ಶಿಕ್ಷಕರಾದ ಶ್ರೀಮತಿ ತೇಜಾವತಿಯವರು ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲೆಯ ವಿಜ್ಞಾನ ಶಿಕ್ಷಕ ಪವನ್ ಕುಮಾರ್ ರವರು ನಿರೂಪಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ಗೇರುಕಟ್ಟೆ: ಕೊರಂಜ ಸ.ಉ.ಪ್ರಾ. ಶಾಲೆಯ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya
error: Content is protected !!