23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾ ಗೇರುಕಟ್ಟೆಯಲ್ಲಿ ವಶ: ಸ್ಕೂಟರ್ ಸಹಿತ ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಕ್ರಮವಾಗಿ ಸಾಗಾಟಮಾಡುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಳ್ತಂಗಡಿ ಪೊಲೀಸರು ಗೇರುಕಟ್ಟೆಯಲ್ಲಿವಶಪಡಿಸಿಕೊಂಡಿದ್ದು ಇಬ್ಬರನ್ನು ಬಂಧಿಸಿದ ಪ್ರಕರಣ ವರದಿಯಾಗಿದೆ.

ಗೇರುಕಟ್ಟೆ ನಿವಾಸಿ ಉಮ್ಮರ್ ಫಾರೂಕ್ ಹಾಗೂ ಮುಂಡಾಜೆ ಸೋಮಂದಡ್ಕ ನಿವಾಸಿ ಸತೀಶ್ ಯಾನೆ ಸ್ಕಾರ್ಪಿಯೋ ಸತೀಶ್ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಗೇರುಕಟ್ಟೆ ಸಮೀಪ ಓಡುರೊಟ್ಟು ಎಂಬಲ್ಲಿ ಕೆ..ಎ 70ಜೆ.5511ನಂಬರಿನ ಸ್ಕೂಟಿಯೊಂದಿಗೆ ಅನುಮಾನಾಸ್ಪದವಾಗಿ ನಿಂತಿರುವುದನ್ನು ನೋಡಿದ ಬೆಳ್ತಂಗಡಿ ಪಿ.ಎಸ್.ಐ ಚಂದ್ರಶೇಖರ್ ಹಾಗೂ ತಂಡ ತಡೆದು ವಿಚರಣೆ ನಡೆಸಿ ತಪಾಸಣೆ ನಡೆಸಿದಾಗ ಆರೋಪಿಗಳ ಬಳಿಯಿಂದ 2.10ಕೆ.ಜಿ ಗಾಂಜಾ ಅಲ್ಲದೆ ಸತೀಶ್ ಕೈಯಲ್ಲಿ 55ಗ್ರಾಂ ಗಾಂಜಾ ಪತ್ತೆಯಾಗಿದೆ.

ವಶಪಡಿಸಿಕೊಂಡಿರುವ ಒಟ್ಟು ಗಾಂಜಾದ ಮೌಲ್ಯ 51,000 ಎಂದು ಅಂದಾಜಿಸಲಾಗಿದೆ. ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು,‌‌ ಗಾಂಜಾ ಸಾಗಾಟಕ್ಕೆ ಕೃತ್ಯಕ್ಕೆ ಬಳಸಿದ ಸ್ಕೂಟರ್ ನ್ನು ಆರೋಪಿಗಳೊಂದಿಗೆ ವಶಕ್ಕೆ ಪಡೆದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 25/2024 ಕಲಂ: 8( c ) ,20(b) NDPS ACT ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya
error: Content is protected !!