24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

ಶಿಬಾಜೆ: ಇಲ್ಲಿಯ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಫೆ.29 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಬೆಳಿಗ್ಗೆ ಕಲಶ ಪೂಜೆ , ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ನಂತರ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ದಿವಾಕರ ಹೆಬ್ಬಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಘವೇಂದ್ರ ನಾಯಕ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಅರ್ಚಕರು ಮತ್ತು ಊರವರು ಉಪಸ್ಥಿತರಿದ್ದರು.

ರಾತ್ರಿ ಗಂಟೆ 8ಕ್ಕೆ ರಂಗಪೂಜೆ (ಗಣಪತಿ ಮತ್ತು ದೇವಿ ಸನ್ನಿಧಿಯಲ್ಲಿ) ನಡೆಯಲಿದೆ.

Related posts

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ : ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya
error: Content is protected !!