25.3 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಾಜೇಶ್ ಕೆ ಮಾತನಾಡುತ್ತಾ ನಮ್ಮ ದೇಶದ ಅಭಿವೃದ್ಧಿಗೆ ಅಡಿಪಾಯವಾಗಿರುವ ನಮ್ಮ ವಿಜ್ಞಾನಿಗಳ ಅದ್ಭುತ ಸಾಧನೆಗಳನ್ನು ಸ್ಮರಿಸುತ್ತಾ ಯುವಜನರಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ತೇಜಿಸಬೇಕು ಮತ್ತು ವಿದ್ಯಾರ್ಥಿಗಳು ಕುತೂಹಲದಿಂದ ವಿಜ್ಞಾನದ ಪ್ರಯೋಗಗಳು ಹಾಗೂ ಮಾದರಿಗಳನ್ನು ತಯಾರಿಸುವ ಬಗ್ಗೆ ಪ್ರೇರಣೆ ನೀಡಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಸ್ವಾಮಿ ಕೆ ಎ .ವಹಿಸಿ ಮಾತನಾಡುತ್ತಾ ರಾಮನ್ ಪರಿಣಾಮದ ಆವಿಷ್ಕಾರವನ್ನು ಸ್ಮರಿಸುವ ರಾಷ್ಟ್ರೀಯ ಆಚರಣೆಯು ನಮ್ಮ ರಾಷ್ಟ್ರದ ವೈಜ್ಞಾನಿಕ ಸಮುದಾಯವನ್ನು ಗೌರವಿಸುವಂತಿದೆ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಸ್ಥಳೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.

ಪ್ರಶಿಕ್ಷಣಾರ್ಥಿಗಳಾದ ಅಂಬಿಕಾ ಹಾಗೂ ಯತೀಕ್ಷಾ ರಾಷ್ಟ್ರೀಯ ವಿಜ್ಞಾನ ದಿನದ ಕುರಿತು ಮಾತನಾಡಿದರು.

ಉಪನ್ಯಾಸಕರಾದ ಮಂಜು ಆರ್, ಅನುಷಾ ಡಿ.ಜೆ. ಹಾಗೂ ಸಿಬ್ಬಂದಿ ವರ್ಗದವರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿರಿದ್ದರು.

ಪ್ರಶಿಕ್ಷಣಾರ್ಥಿಗಳಾದ ಪ್ರತೀಕ್ಷಾ ಹಾಗೂ ದಿವ್ಯ ಪ್ರಾರ್ಥಿಸಿ, ಜಯಶ್ರೀ ಸ್ವಾಗತಿಸಿ, ಚಿತ್ರಲೇಖ ವಂದಿಸಿ, ಶಮೀಮ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಶಿವಶಕ್ತಿ ಅಯ್ಯಂಗಾರ್ ಬೇಕರಿ, ಉಜಿರೆಯ ಅಮರ್ಥ್ಯ ಬೇಕರಿಯಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ವಲಯಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿ ಶ್ರೀ ಧ. ಮಂ. ಆಂ.ಮಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಫೆ. 14 : ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣಾ ಶಿಬಿರ

Suddi Udaya
error: Content is protected !!