April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

ಕಲ್ಮಂಜ: ಸತ್ಯನಾಪುರದ ಸತ್ಯೊದ‌ ಸಿರಿಗಳ ಮೂಲ ಆಲಡೆ ಕ್ಷೇತ್ರ ಶ್ರೀ ಲೋಕನಾಥೇಶ್ವರ ದೇವಸ್ಥಾನ ಕನ್ಯಾಡಿ-ನಿಡಿಗಲ್ ಇದರ ಈ ವರ್ಷದ ಜಾತ್ರಾ ಮಹೋತ್ಸವವು ಮಾ.23 ರಿಂದ ಮಾ. 27 ರವರೆಗೆ ನಡೆಯಲಿದ್ದು ಈ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಫೆ.28 ರಂದು ದೇವಸ್ಥಾನದ ವಠಾರದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಯವರಾದ ಶ್ರೀನಿವಾಸ್ ಡಿಪಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವರ್ಷದ ನಡ್ವಾಲ್‌ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಮಾಜಿ ವ್ಯವಸ್ಥಾಪನಾ ಸಮಿತಿ‌ ಸದಸ್ಯರಾದ ಯಶೋಧರ ಗೌಡ ಕೊಡ್ಡೋಲುರವರು ಸರ್ವಾನುಮತದಿಂದ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಚೇತನ್ ಶೆಟ್ಟಿ ಗುರಿಪಳ್ಳ, ಕೋಶಾಧಿಕಾರಿಯಾಗಿ ಸಂತೋಷ್ ಗೌಡ ಗೋಳಿದೊಟ್ಟು ಇವರು ಆಯ್ಕೆಯಾದರು.

ಸಭೆಯಲ್ಲಿ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಜಯಂತ ಗೌಡ, ಸುಂದರ ಪೂಜಾರಿ, ಅರ್ಚಕರಾದ ಕೃಷ್ಣಮೂರ್ತಿ ಹೊಳ್ಳ, ನೀಲಯ್ಯ ಪೂಜಾರಿ, ದಿವಾಕರ ಏಣೀರು, ಪ್ರವೀಣ್ ವಿ.ಜಿ, ಪ್ರಸಾದ್ ಕುಮಾರ್, ನಾಣ್ಯಪ್ಪ ಪೂಜಾರಿ, ಭದ್ರಯ್ಯ ಪೂಜಾರಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya
error: Content is protected !!