25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜಕೀಯವರದಿ

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

ಬೆಂಗಳೂರು: ತುಳುವಿಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಬಗ್ಗೆ ಈಗಾಗಲೇ ಎರಡು ಭಾಷೆಗಳಿಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಿರುವ ಬಿಹಾರ, ಪಶ್ಚಿಮ ಬಂಗಾಲ ಮತ್ತು ಆಂಧ್ರ ಪ್ರದೇಶಕ್ಕೆ ಅಧಿಕಾರಿಗಳ ತಂಡವನ್ನು ಕಳುಹಿಸಿ ವರದಿ ಪಡೆದು ಕಾನೂನು ಇಲಾಖೆಗೆ ಸಲ್ಲಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಬಿ. ಎಂ. ಫಾರೂಖ್ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ತುಳುವಿಗೆ ರಾಜ್ಯದ ಎರಡನೇ ಭಾಷೆಯ ಸ್ಥಾನ ನೀಡುವುದು ನಮ್ಮ ಗಮನದಲ್ಲಿದೆ. ಆದರೆ ನಿಯಮಗಳ ಪಾಲನೆ ಆಗಬೇಕಿದೆ. ಡಾ। ಮೋಹನ್‌ ಆಳ್ವರ ಸಮಿತಿ ನೀಡಿದ ವರದಿ ನಮ್ಮ ಮುಂದಿದೆ. ಆದರೆ ಕಾನೂನು ಇಲಾಖೆಯು ಅನ್ಯ ರಾಜ್ಯಗಳ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಬಯಸಿರುವ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಗೆ ಸಮಿತಿ ಕಳುಹಿಸಲು ಸರಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು.

ನಾವು ಈಗಾಗಲೇ ಈ ಮೂರು ರಾಜ್ಯಗಳಿಗೆ ಪತ್ರ ಬರೆದು ದ್ವಿಭಾಷೆ ಅಳವಡಿಕೆ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೆವು. ಆದರೆ ಈ ರಾಜ್ಯಗಳಿಂದ ಸಮರ್ಪಕ ಪ್ರತಿಕ್ರಿಯೆ ಬಂದಿಲ್ಲ. ಆದ್ದರಿಂದ ನಾವೇ ಈಗ ತಂಡ ಕಳುಹಿಸಲು ಮುಂದಾಗಿದ್ದೇವೆ. ನಮ್ಮ ತಂಡ ನೀಡುವ ವರದಿಯನ್ನು ಕಾನೂನು ಇಲಾಖೆಗೆ ಸಲ್ಲಿಸುತ್ತೇವೆ ಎಂದು ಶಿವರಾಜ ತಂಗಡಿ ಭರವಸೆ ನೀಡಿದರು.

ಪ್ರತಾಪಸಿಂಹ ನಾಯಕ್ ಮಾತನಾಡಿ, 20-25 ವರ್ಷಗಳಿಂದ ತುಳುವಿಗೆ ಅಧಿಕೃತ ಸ್ಥಾನಮಾನ ನೀಡುವ ಪ್ರಯತ್ನ ನಡೆಯುತ್ತಿದೆ. ಆದರೆ ಇನ್ನೂ ಸಿಕ್ಕಿಲ್ಲ. ಇದಕ್ಕೆ ಕಾರಣವೇನು ಎಂದು ಸರಕಾರ ತಿಳಿಸಬೇಕು ಎಂದು ಆಗ್ರಹಿಸಿದರು.

ಹರೀಶ್‌ಕುಮಾ‌ರ್ ಮಾತನಾಡಿ, ತುಳುವನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನ ನಡೆಯಬೇಕು ಎಂದು ಆಗ್ರಹಿಸಿದರು. ಭಾರತಿ ಶೆಟ್ಟಿ ಹಾಗೂ ತೇಜಸ್ವಿನಿ ಅವರು ದನಿಗೂಡಿಸಿದರು.

Related posts

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya
error: Content is protected !!