ಕಳೆಂಜ: ಗ್ರಾಮ ಪಂಚಾಯತ್ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.1 ರಿಂದ ರಾಜ್ಯಾದ್ಯಂತ ಚಳುವಳಿ ನಡೆಯುತ್ತಿದ್ದು ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಹಾಗೂ ಸಿಬ್ಬಂದಿ ಹಲವು ವರ್ಷಗಳಿಂದ ಸಂಘಟನೆಯ ಮೂಲಕ ಇಲಾಖೆಗೆ ಹಲವು ಬೇಡಿಕೆಗಳನ್ನು ಮಂಡಿಸುತ್ತಾ ಬಂದಿದ್ದಾರೆ. ಆದರೆ ಇಲಾಖೆಯು ನೌಕರರ ಮೂಲ ಬೇಡಿಕೆಗಳಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ, ವೇತನ ಶ್ರೇಣಿ ಆರೋಗ್ಯಭದ್ರತೆ ಅನುಮೋದನೆ ಆಗದಿರುವ ಬಗ್ಗೆ, ನೌಕರರಿಗೆ ಸೇವಾ ಭದ್ರತೆ, ಡಾಟಾ ಎಂಟ್ರಿ ಆಪರೇಟಿವ್ ಅನುಮೋದನೆ ಸಮಸ್ಯೆ, ಸಕಾಲದಲ್ಲಿ ಮುಂಬಡ್ತಿ ನಿವೃತ್ತಿಯಲ್ಲಿ ಆರ್ಥಿಕ ಭದ್ರತೆಗಳನ್ನು ಈಡೇರಿಸದೆ ನೌಕರರು ಶೋಷಣೆಗಳಿಗಾಗುತ್ತಿದ್ದಾರೆ.