April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಹಾಗೂ 15ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಶ್ರೀಮತಿ ತಾರಕೇಶರಿ ಸಹಾಯಕ ನಿರ್ದೇಶಕರು ಅಕ್ಷರ ದಾಸೋಹ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಗ್ರಾಮ ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಸಾಮಾಜಿಕ ಪರಿಶೋಧಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು, ತಾಂತ್ರಿಕ ವಿಭಾಗದ ಅಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು, ಫಲಾನುಭವಿಗಳು ಹಾಗೂ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿದರು, ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.

Related posts

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!