September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

ಮಂಗಳೂರು: ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಹಾಗೂ ಕವಿ ಮನೋಹರ್ ಪ್ರಸಾದ್ ಅವರು ಇಂದು(ಮಾ.1) ಮುಂಜಾನೆ ನಿಧನರಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು.
ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಮುದ್ರಣ ಮಾಧ್ಯಮಕ್ಕೆ ನೀಡಿರುವ ಅಪಾರ ಸೇವೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ

Related posts

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya
error: Content is protected !!