24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಬೆಳ್ತಂಗಡಿ ಮಹಿಳಾ ಶಾಖೆ ಇದರ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭವು ಮಾ.1ರಂದು ಬೆಳ್ತಂಗಡಿ ಸಂತೆಕಟ್ಟೆ ಪ್ರಜ್ವಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಶಾಖಾ ಕಚೇರಿಯನ್ನು ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರದ ಡಾ. ತಾರಕೇಶ್ವರಿ ವಿ. ಶೆಟ್ಟಿ ಉದ್ಘಾಟಿಸಿ ಶುಭಕೋರಿದರು.

ಅಧ್ಯಕ್ಷತೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್. ಜಯರಾಮ ಶೆಟ್ಟಿ ವಹಿಸಿದ್ದರು.

ಉಜಿರೆ ಜನಾರ್ಧನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೇಟ್ನಾಯ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದರು.

ಭದ್ರತಾ ಕೊಠಡಿಯ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್ ನೆರವೇರಿಸಿದರು.

ಗಣಕ ಯಂತ್ರದ ಉದ್ಘಾಟನೆಯನ್ನು ಗುರುವಾಯನಕೆರೆ ಎಕ್ಸೆಲ್ ಪಿ.ಯು ಕಾಲೇಜು ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ. ಉದ್ಘಾಟಿಸಿ ತನ್ನ ಶಿಕ್ಷಣಕ್ಕೆ ವಿಜಯ ಕ್ರೆಡಿಟ್ ಸಂಸ್ಥೆ ಸಹಕಾರ ನೀಡಿದ್ದನ್ನು ನೆನಪಿಸಿದರು.

ಈ ಸಂದರ್ಭದಲ್ಲಿ ಕಟ್ಟಡ ಮಾಲೀಕರಾದ ಜಯಶ್ರೀ ನಾಯಕ್, ಬಂಟರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ಟೀಚರ್ ಕೋ ಆಪರೇಟಿವ್ ಬ್ಯಾಂಕ್ ಮ್ಯಾನೇಜರ್ ರವೀಂದ್ರ ಶೆಟ್ಟಿ ಬಳಂಜ, ಕಿರಣ್ ಶೆಟ್ಟಿ ಜೈನ್ ಪೇಟೆ, ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಎಂ.ಜಿ. ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರಾದ ಬಿ. ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ ಹೆಚ್., ಜಯಂತ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಬಿ. ನಾರಾಯಣ ಶೆಟ್ಟಿ, ಕೃಷ್ಣ ರೈ ಟಿ., ರಘುರಾಮ ಶೆಟ್ಟಿ ಎ., ಪುರಂದರ ಶೆಟ್ಟಿ, ಕೆ. ಸದಾಶಿವ ಶೆಟ್ಟಿ, ಜಯರಾಮ ಭಂಡಾರಿ ಎಂ., ಶ್ರೀಮತಿ ಅಂಬಾ ಬಿ. ಆಳ್ವ, ರಾಜೇಶ್ ಶೆಟ್ಟಿ, ಮಂಜುನಾಥ ರೈ. ಶ್ರೀಮತಿ ಸಾರಿಕಾ ಶೆಟ್ಟಿ, ಪ್ರಭಾರ ಶಾಖಾ ಪ್ರಬಂಧಕಿ ಶ್ರೀಮತಿ ಅಖಿಲಾ ಆರ್. ಶೆಟ್ಟಿ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ನಿರ್ದೇಶಕರ ರಘುರಾಮ ಶೆಟ್ಟಿ ಎ ಅತಿಥಿಗಳನ್ನು ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!