September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ: ಇಲ್ಲಿನ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.28 ರಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.

ಮುಖ್ಯ ಶಿಕ್ಷಕ ಸುಬ್ರಹ್ಮ ಣ್ಯ ರಾವ್ ಅವರು ಮಾತನಾಡಿ, ಭಾರತ ರತ್ನ ಸರ್ ಸಿ ವಿ ರಾಮನ್ ಅವರ ಜನ್ಮದಿನದ ಬಗ್ಗೆ ಮಾತನಾಡಿದರು. “ಭಾರತ ಕಂಡ ಶ್ರೇಷ್ಠ ವಿಜ್ಞಾನಿಯ ಜನ್ಮ ದಿನಾಚರಣೆಯ ನಿಮಿತ್ತ ಈ ದಿನವನ್ನು ನಾವು ನೆನಪಿಸಿಕೊಳ್ಳುವುದರ ಜೊತೆಗೆ ನಾವು ಕಂಡ ವಿಚಾರದ ಬಗ್ಗೆ ಪ್ರಶ್ನಿಸುವ, ವಿಮರ್ಶಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈಚಾರಿಕತೆಯನ್ನು ಬೆಳೆಸಿಕೊಂಡಾಗ ಮಹಾನ್ ಸಂಶೋಧನೆಗಳಿಗೆ ನಾಂದಿಯಾಗುತ್ತದೆ” ಎಂದರು.

ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಶಿಕ್ಷಕಿ ಉಷಾ ಕುಮಾರಿ ಬೋಧಿಸಿದರು.

ಶಿಕ್ಷಕ ಶೇಖರ್ ಗೌಡ ನಿರೂಪಿಸಿದರು. ಶಿಕ್ಷಕಿ ಕಾವ್ಯಾ ಸ್ವಾಗತಿಸಿ, ಧನ್ಯವಾದವಿತ್ತರು.

ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಲಾಯಿತು.

Related posts

ರೆಖ್ಯದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ವಾರಿಸುದಾರರ ಪತ್ತೆಗೆ ಧರ್ಮಸ್ಥಳ ಪೊಲೀಸರ ಪ್ರಕಟಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya
error: Content is protected !!