ಬೆಳ್ತಂಗಡಿ: ಜೈನರು ಅಲ್ಪಸಂಖ್ಯಾತರಾದರೂ ಸಮಾಜದ ಮೇಲೆ ಜೈನರ ಜೀವನ ಶೈಲಿ, ದಿಗಂಬರ ಮುನಿಗಳ ಆಚಾರ-ವಿಚಾರ, ಆಹಾರ-ವಿಹಾರ ಮತ್ತು ಉಪದೇಶಾಮ್ರತ ಸಮಾಜದ ಮೇಲೆ ಗಾಢ ಪರಿಣಾಮ ಬೀರುತ್ತದೆ.ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಮಾ.1ರಂದು ವೇಣೂರಿನಲ್ಲಿ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪೂಜ್ಯ ಅಮರಕೀರ್ತಿ ಮುನಿಮಹಾರಾಜರು ಹಾಗೂ ಮೂಡಬಿದ್ರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಆಶೀರ್ವಚನ ನೀಡಿದರು.
ಅಧ್ಯಕ್ಶತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಎಲ್ಲರೂ ಭಾವನೆಯಿಂದ ಬಾಹುಬಲಿ ಆಗಬೇಕು. ಮಸ್ತಕಾಭಿಷೇಕದ ಸವಿ ನೆನಪನ್ನು ಸದಾ ಸ್ಮರಿಸಿಕೊಂಡು ಸಾರ್ಥಕ ಹಾಗೂ ಪವಿತ್ರ ಜೀವನ ನಡೆಸಬೇಕು.
ಸಚಿವ ಡಿ.ಸುಧಾಕರ್ ಮತ್ತು ಪದ್ಮಪ್ರಸಾದ ಅಜಿಲ ಅವರನ್ನು ಗೌರವಿಸಲಾಯಿತು
ಮಸ್ತಕಾಭಿಷೇಕ ಸಮಿತಿಯ ಕಾರ್ಯಾಧಕ್ಶ ಡಾ | ಪದ್ಮಪ್ರಸಾದ ಅಜಿಲ ಸ್ವಾಗತಿಸಿದರು, ಕಾರ್ಯದರ್ಶಿ ವಿ.ಪ್ರವೀಣ್ ಕುಮಾರ್ ಇಂದ್ರ ಧನ್ಯವಾದವಿತ್ತರು. ಅಜಿತ್ ಕುಮಾರ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.