ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

ಬೆಳ್ತಂಗಡಿ: ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯೆಯ ಜೊತೆಗೆ ಕೌಶಲ್ಯ ಇದ್ದಾಗ ಜೀವನದ ದಾರಿಯಲ್ಲಿ ಯಾವುದೇ ರೀತಿಯ ಆತಂಕಗಳು ಇರುವುದಿಲ್ಲ. ಮಹಿಳೆಯರು ಯಾವುದೇ ಹೆಚ್ಚಿನ ಬಂಡವಾಳವಿಲ್ಲದೆ ಸುಲಭವಾಗಿ ನಿರ್ವಹಿಸಬಹುದಾದ ಸ್ವಉದ್ಯೋಗವಾಗಿದೆ. ಇದರಿಂದ ಮಹಿಳೆಯರು ಸ್ವಾವಲಂಬಿ ಬದುಕನ್ನು ರೂಪಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪಂಚಾಯತ್‌ ಸಂಯೋಜಕ ಜಯಾನಂದ್‌ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್–ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಸಾರಿಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು.

ತರಬೇತಿ ಸಂಸ್ಥೆಯ ಪ್ರಾಂಶುಪಾಲ ಸೋಮನಾಥ್‌ ಕೆ. ರವರು ಮಾತನಾಡಿ ಸ್ವಂತ ದುಡಿಮೆ ಮಾಡಲು ಹಲವಾರು ಅವಕಾಶಗಳಿದ್ದು, ತಮ್ಮ ಇಚ್ಛಾಶಕ್ತಿ, ಕೆಲಸದಲ್ಲಿ ಶ್ರದ್ಧೆ ಇದ್ದರೆ ಸ್ವಉದ್ಯೋಗವನ್ನು ನಡೆಸಬಹುದು ಎಂದರು.

ಈ ಸಂರ್ಭದಲ್ಲಿ ತರಬೇತಿ ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಶುಭ ಹಾರೈಸಿದರು.

ತರಬೇತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಸೌಭಾಗ್ಯ ಆರ್.‌ ರವರು ಪ್ರಾತ್ಯಕ್ಷಿಕೆ ಮೂಲಕ ಕಲಿಸಿದರು. ತರಬೇತುದಾರರು ಶ್ರೀಮತಿ ಜಯಶ್ರೀ ಕಾರ್ಯಕ್ರಮ ನಿರ್ವಹಣೆ ಮಾಡಿದರು.

Related posts

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!