22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

ಗುರುವಾಯನಕೆರೆ ಬಳಿಯ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ದೈವಕ್ಷೇತ್ರದ ಜೀರ್ಣೋದ್ಧಾರ ಮತ್ತು ಪುನರ್ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಡೆಯುತ್ತಿರುವ ತುಳುನಾಡ ದೈವಾರಾಧಕರ ಮಹಾ ಸಮಾವೇಶ ಪರ್ವ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು. ಶಾಸ್ತ್ರೀಯ, ಜಾನಪದೀಯ ನೃತ್ಯಗಳೊಂದಿಗೆ, ಹಾಡು , ನಾಟಕಗಳನ್ನು ಒಳಗೊಂಡ ಎಕ್ಸೆಲ್ ಕಲಾ ವೈಭವ ಪ್ರೇಕ್ಷಕರ ಮನ ಸೂರೆಗೊಂಡಿತು.


ಸಾಂಸ್ಕೃತಿಕ ಕಾರ್ಯಕ್ರಮಗಳ ಬಳಿಕ ವಿದ್ಯಾರ್ಥಿಗಳನ್ನು ಪರ್ವ 2024 ರ ಸಂಚಾಲಕರಾದ ಸಂಪತ್ ಬಿ ಸುವರ್ಣ ಮತ್ತು ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾದ ವಿಶ್ವೇಶ ಕಿಣಿ ಗೌರವಿಸಿದರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಪ್ರಾಧ್ಯಾಪಕರು ಉಪಸ್ಥಿತರಿದ್ದರು.

Related posts

ಗೋಕರ್ಣನಾಥ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ: ಯುವವಾಹಿನಿ ಕೇಂದ್ರ ಸಮಿತಿ ನಿಕಟಪೂರ್ವಾಧ್ಯಕ್ಷ ಬಳಂಜ ಬೈಲಬರಿ ಹರೀಶ್ ಕೆ ಪೂಜಾರಿಯವರಿಗೆ ಗೆಲುವು

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!