April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ 57 ವರ್ಷದ ಮಧುಸೂದನ್ ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related posts

ಕುವೆಟ್ಟು ಸ. ಉ. ಪ್ರಾ. ಶಾಲೆಯ ಅಡುಗೆ ಕೋಣೆಯ ವಿಸ್ತೃತ ಕೊಠಡಿ ಉದ್ಘಾಟನೆ

Suddi Udaya

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya

ಬಂದಾರು ಸ.ಹಿ. ಪ್ರಾ. ಶಾಲೆಯಲ್ಲಿ ಬೂತ್ ಸಂಖ್ಯೆ 217ರಲ್ಲಿ ತ್ರಾಂತಿಕ ದೋಷದಿಂದ ಮತದಾನ ಸ್ಥಗಿತ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya

ಕುವೆಟ್ಟು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಭಾರತಿ ಎಸ್ ಶೆಟ್ಟಿ, ಉಪಾಧ್ಯಕ್ಷರಾಗಿ ಗಣೇಶ್ ಕೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!