27.4 C
ಪುತ್ತೂರು, ಬೆಳ್ತಂಗಡಿ
September 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಆಡಳಿತ ಮಂಡಳಿಗೆ ಚುನಾವಣೆ ಬೆಳ್ತಂಗಡಿ ಕ್ಷೇತ್ರದಿಂದ ಕುಶಾಲಪ್ಪ ಗೌಡ ಪೂವಾಜೆ ಅವಿರೋಧ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮುಂದಿನ ಐದು ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಯ ಒಟ್ಟು 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ 15 ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದು, ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿಯ ಹಿರಿಯ ಮುಖಂಡ ಕುಶಾಲಪ್ಪ ಗೌಡ ಪೂವಾಜೆ ಅವರು ಮಾತ್ರ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನಾಮಪತ್ರ ಸಲ್ಲಿಸಲು ಮಾ.3ರಂದು ಅಂತಿಮ ದಿನವಾಗಿದ್ದು ಒಟ್ಟು 16 ಸ್ಥಾನಗಳ ಪೈಕಿ 15 ಸ್ಥಾನಗಳಿಗೆ
ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದೆ.

ಬೆಳ್ತಂಗಡಿಯಿಂದ ಕುಶಾಲಪ್ಪ ಗೌಡ ಪೂವಾಜೆ, ಬಂಟ್ವಾಳದಿಂದ ಟಿ.ಜಿ ರಾಜಾರಾಮ ಭಟ್, ಪುತ್ತೂರಿನಿಂದ ಶಶಿಕುಮಾ‌ರ್ ರೈ ಬಾಲ್ಯೂಟ್ಟು, ಸುಳ್ಯದಿಂದ
ಎಸ್.ಎನ್ ಮನ್ಮಥ, ಮಂಗಳೂರಿನಿಂದ ಹಾಲಿ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾ‌ರ್, ಭಾಸ್ಕರ ಕೋಟ್ಯಾನ್, ವಾದಿರಾಜ ಶೆಟ್ಟಿ, ವಿನಯಕುಮಾ‌ರ್ ಸೂರಿಂಜೆ, ಉಡುಪಿಯಿಂದ ದೇವಿಪ್ರಸಾದ್‌ ಶೆಟ್ಟಿ, ಅಶೋಕ್ ರೈ, ಕುಂದಾಪುರದಿಂದ ರಾಜೀವ ಪೂಜಾರಿ, ಮಹೇಶ್‌ ಹೆಗ್ಡೆ, ಟಿಎಪಿಟಿಎಂಎಸ್‌ನಿಂದ ಮೋನಪ್ಪ ಶೆಟ್ಟಿ ಎಕ್ಕಾರು, ಕ್ರೆಡಿಟ್ ಸಹಕಾರಿಯಿಂದ ಜಯರಾಜ್ ರೈ ನಾಮಪತ್ರ ಸಲ್ಲಿಸಿದ್ದು ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ.

ಬಾಕಿಯಿರುವ ಇತರ ಕ್ಷೇತ್ರಕ್ಕೆ ಹಾಲಿ ನಿರ್ದೇಶಕ ಪುತ್ತೂರಿನ ಎಸ್.ಬಿ ಜಯರಾಮ ರೈ ಹಾಗೂ ಬಂಟ್ವಾಳ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ.

ಈ ಸ್ಥಾನಕ್ಕೆ ಚುನಾವಣೆ ನಡೆಯ ಬಹುದೇ ಅಥವಾ ಅವಿರೋಧ ಆಯ್ಕೆಯಾಗಬಹುದೇ ಎಂದು ಕಾದು ನೋಡಬೇಕಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಮಂಗಳೂರು ವಿಭಾಗೀಯ ರೈಲ್ವೇ ಸಮಸ್ಯೆಗಳ ಬಗ್ಗೆ ಚರ್ಚೆ ಹಾಗೂ ಶೀಘ್ರದಲ್ಲಿ ವಂದೇ ಭಾರತ್ ರೈಲು ಮಂಗಳೂರಿಗೆ : ರಾಜೇಶ್ ಪುದುಶೇರಿ

Suddi Udaya

ಪುತ್ತೂರು ವಿವೇಕಾನಂದ ಕಾಲೇಜಿನ ಇಕೋ ಕ್ಲಬ್ ವಿದ್ಯಾರ್ಥಿಗಳಿಂದ ಗುರುವಾಯನಕೆರೆ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!