24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

ಇಳಂತಿಲ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15 ನೇ ಹಣಕಾಸು ಯೋಜನೆಯ 2023-2024 ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಮಾ.04 ರಂದು ಇಳಂತಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಜೋಸೆಫ್ ಪಿ ಎಸ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವಿಶೇಷ ಗ್ರಾಮ ಸಭೆಯಲ್ಲಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಹಾಗೂ ಸಾಮಾಜಿಕ ಪರಿಶೋಧನಾ ತಂಡದ ಸದಸ್ಯರು, ತಾಲೂಕು ಪಂಚಾಯತ್ ನರೇಗಾ ಇಂಜಿನೀಯರ್ ಎಂ ಶರಣ್ ರೈ, ಪಂ.ರಾಜ್ ಕಿರಿಯ ಇಂಜಿನೀಯರ್ ಗಫೂರ್ ಸಾಬ್, ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಸವಿತಾ ಹೆಚ್, ಸದಸ್ಯರಾದ ಚಂದ್ರಿಕಾ ಭಟ್ ಹಾಗೂ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ವಿಜಯ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸಂಜೀವ ನಾಯ್ಕ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಕನ್ಯಾಡಿ I : ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!