24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

ಬೆಳ್ತಂಗಡಿ: ಮಹಾಶಿವರಾತ್ರಿ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಸಾವಿರಾರು ಪಾದಯಾತ್ರಿಗಳ ಆರೋಗ್ಯ ರಕ್ಷಣೆಯ ಉದ್ದೇಶದಿಂದ ಪೂಜ್ಯ ಹೆಗ್ಗಡೆಯವರ ಆದೇಶದಂತೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಮಾ. 5 ರಿಂದ ಉಚಿತ ವೈದ್ಯಕೀಯ ಸೇವೆಯನ್ನು ಪ್ರಾರಂಭಿಸಲಾಯಿತು.


ಪಾದಯಾತ್ರಿಗಳ ಆರೋಗ್ಯ ಸೇವೆಗಾಗಿ ತೆರೆಯಲ್ಪಟ್ಟ ಮುಂಡಾಜೆ ಹಾಗೂ ಚಾರ್ಮಾಡಿ ಆರೋಗ್ಯ ಶಿಬಿರಗಳಿಗೆ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಕಮಿಟಿ ಸದಸ್ಯರಾದ ರವಿ ಹಾಗೂ ಗಣೇಶ್ ದೀಪ ಬೆಳಗಿಸಿ ಚಾಲನೆ ನೀಡಿದರು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಶಿಬಿರದ ಮೇಲ್ವಿಚಾರಕ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು. ಜಗನ್ನಾಥ. ಎಂ ಕಾರ್ಯಕ್ರಮ ನಡೆಸಿಕೊಟ್ಟರು.


ಹೆಗ್ಗಡೆಯವರ ಆಶಯದಂತೆ ಪಾದಯಾತ್ರಿಗಳಲ್ಲಿ ಶಿವನನ್ನು ಕಾಣುವ ಶುದ್ಧ ಮನಸ್ಸಿನಿಂದ ಹೇಮಾವತಿ ವಿ ಹೆಗ್ಗಡೆಯವರ ಹಾಗೂ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದೊಂದಿಗೆ ಚಾರ್ಮಾಡಿ, ಮುಂಡಾಜೆ, ಧರ್ಮಸ್ಥಳ, ಬೂಡುಜಾಲು, ಎಸ್.ಡಿ.ಎಂ ಡಿಎಡ್ ಕಾಲೇಜು ಇಲ್ಲಿ ಪಾದಯಾತ್ರಿಗಳಿಗೆ ಉಚಿತ ಆರೋಗ್ಯ ಶಿಬಿರ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪಾದಯಾತ್ರಿಗಳಿಗೆ ತುರ್ತು ಆರೋಗ್ಯ ಸೇವೆ ನೀಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯವಿರುವ ಔಷಧಿ, ಮುಲಾಮು, ಸ್ಪ್ರೇ ಬ್ಯಾಂಡೇಜ್, ಗ್ಲುಕೋಸ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!