September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಪುಂಜಾಲಕಟ್ಟೆಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಮಾಸಿಕ ಆರೋಗ್ಯ ಜಾಗೃತಿ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!