ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಬೈಕ್ ಮತ್ತು ಒಂದು ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿ ಇಬ್ಬರು ಅಪ್ರಾಪ್ತ ಬಾಲಕರು ಸೇರಿ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳಾದ ಹಾಸನ ಜಿಲ್ಲೆಯ ಹೊಸಲೈನ್ ರಸ್ತೆಯ ಡಬ್ಬಲ್ ಟ್ಯಾಂಕ್ ಹಿಂಭಾಗದ ನಂದನ ಗೌಡ ಕೆ.ಡಿ(21), ಹಾಸನ ಜಿಲ್ಲೆಯ ಹೇಮಾವತಿ ಆಸ್ಪತ್ರೆ ಬಳಿಯ ಹೇಮಂತ್ (20), ಹಾಸನ ಜಿಲ್ಲೆಯ ಪಾಂಡುರಂಗ ದೇವಸ್ಥಾನ ಬಳಿಯ ಹರ್ಷಿತ್ ಕುಮಾರ್ ಹೆಚ್.ಎಸ್(19) ಎಂಬವರನ್ನು ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇವರ ಜೊತೆ ಇಬ್ಬರು ಅಪ್ರಾಪ್ತ ಬಾಲಕರು ಕಳ್ಳತನದಲ್ಲಿ ಭಾಗಿಯಾಗಿದ್ದು ಅವರನ್ನು ಮನೆಯವರ ಜೊತೆ ನೋಟಿಸ್ ನೀಡಿ ಕಳುಹಿಸಿ ಕೊಡಲಾಗಿದೆ.
ಆರೋಪಿಗಳಿಂದ ನಾಲ್ಕು ವಾಹನಗಳು ವಶಕ್ಕೆ: ಆರೋಪಿಗಳು ಕಳವು ಮಾಡಿಕೊಂಡು ಹೋಗಿದ್ದ KA-21-Y-0967 ನೇ ನೋಂದಣಿ ಸಂಖ್ಯೆಯ YAMAHA ಕಂಪನಿಯ R15 ಮಾದರಿಯ ಮೋಟಾರ್ YAMAHA COMPANY RX 100, KA 21 W 4320 ಸುಜುಕಿ ಜಿಕ್ಸರ್ ಮೋಟಾರ್ ಸೈಕಲ್, ಮೋಟರ್ ಸೈಕೆಲ್, ಮತ್ತು KA 20 ME 1456 ನೇ ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಮಾರುತಿ 800 ಕಾರು ಸೇರಿ ಒಟ್ಟು ಮೂರು ಬೈಕ್ ಮತ್ತು ಒಂದು ಕಾರು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಅಂದಾಜು ಮೌಲ್ಯ ಎರಡು ಲಕ್ಷ ಅಗಿದೆ ಎನ್ನಲಾಗಿದೆ.
ಕಾರ್ಯಾಚರಣೆಯಲ್ಲಿ ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಿಷ್ಯಂತ್ ಸಿ ಬಿ ನಿರ್ದೇಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಧರ್ಮಪ್ಪ ಎನ್. ರವರ ಮತ್ತು ರಾಜೇಂದ್ರ ಡಿ.ಎಸ್‌ರವರ ಹಾಗೂ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ರವರ ಮತ್ತು ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ವಸಂತರಾಮ ಆಚಾರ್ ರವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ಪಿ.ಎಸ್.ಐ (ಕಾ.ಸು) ಅನಿಲ್ ಕುಮಾರ್ ಡಿ, ಪಿ.ಎಸ್.ಐ (ತನಿಖೆ) ಸಮರ್ಥ ಗಾಣಿಗೇರ್ ರವರ ನೇತೃತ್ವದಲ್ಲಿ ಸಿಬ್ಬಂದಿ ಎ.ಎಸ್.ಐ ಸ್ಯಾಮುವೆಲ್, ರಾಜೇಶ್ ಎನ್, ಶಶಿಧರ, ಪ್ರಶಾಂತ, ಅಸ್ಲಾಂ, ಸತೀಶ್ ನಾಯ್ಕ, ಕೃಷ್ಣಪ್ಪ, ಪ್ರಮೋದಿನಿ, ಮಲ್ಲಿಕಾರ್ಜುನ, ಅಭಿಜಿತ್, ಗೋವಿಂದ ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.