23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು.

ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ ಕಾರ್ಯದರ್ಶಿ ಪ್ರಭಾಕರ ಆಚಾರ್ಯ ಸವಣಾಲು., ವಸತಿ ವಿಭಾಗದ ಪ್ರಮುಖ್ ತಣ್ಣೀರುಪಂತ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರು, ದರ್ಶನ ವಿಭಾಗದ ಪ್ರಮುಖ್ ನವೀನ್ ನಿಡ್ಲೆ, ನೋಂದಾವಣಿ ವಿಭಾಗದ ಪ್ರಮುಖ್ ಬಾಲಕೃಷ್ಣ ಬೆಳಾಲು, ಮಾಜಿ ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ಮಾಜಿ ಜಿ.ಪಂ.ಸದಸ್ಯ ಕೊರಗಪ್ಪ ನಾಯ್ಕ್ ರವರನ್ನು ಒಳಗೊಂಡ 52 ಜನರ ತಂಡ ಮಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದರು.

ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರರವರು ಯಾತ್ರಾರ್ಥಿಗಳ ಪ್ರಯಾಣಕ್ಕೆ ಶುಭಕೋರಿದರು. ಈ ವೇಳೆ ಯಾತ್ರಾ ಸಂಪರ್ಕ ಪ್ರಮುಖ್ ಸೀತಾರಾಮ ಬೆಳಾಲು ಜೊತೆಗಿದ್ದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!