September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

ಬಳಂಜ: ಪ್ರತಿಷ್ಠಿತ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಬಳಂಜ ಸರಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪೆನ್ನು ವಿತರಣೆ ಕಾರ್ಯಕ್ರಮವು ಮಾ.6ರಂದು ನಡೆಯಿತು.

ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಇವರ ನೇತೃತ್ವದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಈಗಾಗಲೇ ಕರ್ನಾಟಕ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಲ್ಲೂ ಕಾರ್ಯಕ್ರಮಗಳನ್ನು ನೀಡಿ ಜನ ಮೆಚ್ಚುಗೆಯನ್ನು ಪಡೆದಿದ್ದು ಸ್ಥಳೀಯವಾಗಿ ಹಲವಾರು ಸಮಾಜಮುಖಿ ಸೇವೆಯನ್ನು ಮಾಡುತ್ತಿದೆ.

ಇದೀಗ ಮಂಡಳಿಯು ಮಹಾ ಶಿವರಾತ್ರಿಯ ಸಂದರ್ಭದಲ್ಲಿ 200ನೇ ಭಜನಾ ಕಾರ್ಯಕ್ರಮವನ್ನು ನೀಡುತ್ತಿದ್ದು ಇದರ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಲು ಪೆನ್ನು ವಿತರಣೆ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಬಳಂಜ ಶಾಲಾ ಮುಖ್ಯೋಪಾದ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಅಭಿಪ್ರಾಯ ಪಟ್ಟಿದ್ದಾರೆ.

Related posts

ಲಾಯಿಲ ವಲಯ ಭಜನಾ ಪರಿಷತ್ತಿನ ಸಭೆ

Suddi Udaya

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮತದಾನ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!