ಇಂದಬೆಟ್ಟು: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬಂಗಾಡಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಾಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇಂದಬೆಟ್ಟು ಬಂಗಾಡಿ ಪ್ರೌಢ ಶಾಲೆಯ 10 ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಗಿದ್ದು ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ದೀಪಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ ಎಸ್.ಎಸ್.ಎಲ್.ಸಿ ಯ ಅಂಕವೇ ಪ್ರಾಮುಖ್ಯವಾಗಿದ್ದು ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ. ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಕಲಾ ರವರು ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್, ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Leave a Comment

error: Content is protected !!