ನಾವೂರು: ಗ್ರಾಮ ಪಂಚಾಯತ್ ನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯ 2023-24ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಹಂತದ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆಯು ಮಾ.06ರಂದು ನಾವೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಅಧಿಕಾರಿ, ನಾವೂರು ಪ್ರೌಢ ಶಾಲೆ ಅಧ್ಯಾಪಕ ಸುಧಾಕರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ಗಣೇಶ್ ಗೌಡ, ಹರೀಶ್ ಸಾಲಿಯಾನ್, ವೇದಾವತಿ, ಶಾಂತಿ, ಎನ್.ಕೆ ಹಸೈನಾರ್, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಮಲ್ಲ ರೆಡ್ಡಿ ಹಾಗೂ ಸಾಮಾಜಿಕ ಪರಿಶೋಧನಾ ತಂಡದ ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ವಸಂತ ಪೂಜಾರಿ, ತೃಪ್ತಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.