ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನಿಷ್ಠಾನಗೊಳಿಸಲು ಹಾಗೂ ತಾಲೂಕಿನ ಪ್ರತೀ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಗ್ಯಾರಂಟಿ ಸಮಾವೇಶವು ಮಾ.9ರಂದು ಬೆಳಿಗ್ಗೆ 11.00ಕ್ಕೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಗುರುವಾಯನಕೆರೆ ಜೈನ್ ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಲಿದೆ ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ ಹೇಳಿದರು.
ಅವರು ತಾಲೂಕು ಕಚೇರಿಯಲ್ಲಿ ಮಾ.7 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಈ ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು, ಜಿಲ್ಲೆಯ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಗೃಹಲಕ್ಷ್ಮೀ, ಗೃಹಜೋತಿ, ಅನ್ಯಭಾಗ್ಯ, ಶಕ್ತಿಯೋಜನೆ, ಮತ್ತು ಯುವನಿಧಿಯ ಈ ಐದು ಗ್ಯಾರಂಟಿ ಯೋಜನೆಯ ಬಗ್ಗೆ ಫಲಾನುಭವಿಗಳಿಗೆ ಏನಾದರೂ ತಾಂತ್ರಿಕ ಸಮಸ್ಯೆ ಇದ್ದಾರೆ ಅಲ್ಲಿ ಬಂದು ಸರಿಪಡಿಸಬಹುದು.
ಸರ್ಕಾರದ ಪಂಚಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳಿಗೆ ಉಚಿತವಾಗಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಪತ್ರಿ ಗ್ರಾಮ ಪಂಚಾಯತಿಗೆ ಬಸ್ಸುಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.