24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ : ಪಾದಯಾತ್ರಿಗಳಿಗೆ ಸನ್ಮಾನ

ಧರ್ಮಸ್ಥಳ: ಶಿವರಾತ್ರಿ ಎಂಬುದು ತಾಳ್ಮೆ. ಸಂಯಮ, ಜಾಗರಣೆ, ಉಪವಾಸ, ವ್ರತ – ನಿಯಮಗಳ ಪಾಲನೆಯೊಂದಿಗೆ ಪಂಚೆಂದ್ರಿಯಗಳ ನಿಯಂತ್ರಣ ಮಾಡಿ ಎಲ್ಲರಿಗೂ ಮಾನಸಿಕ ಪರಿವರ್ತನೆಯ ಶುಭರಾತ್ರಿಯಾಗಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.

ಅವರು ಮಾ.7ರಂದು ಧರ್ಮಸ್ಥಳದಲ್ಲಿ ಕಳೆದ 45 ವರ್ಷಗಳಿಂದ ಶಿವರಾತ್ರಿ ಸಂದರ್ಭ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರತಿವರ್ಷ ಪಾದಯಾತ್ರೆಯನ್ನು ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ಆಯೋಜಿಸುತ್ತಿರುವ ಹನುಮಂತಪ್ಪ ಸ್ವಾಮೀಜಿ ಮತ್ತು ಅವರ ಶಿಷ್ಯರನ್ನು ಗೌರವಿಸಿ ಅಭಿನಂದಿಸಿದರು.ಮುಂದೆ ನಿರ್ಧಿಷ್ಠ ಗುರಿ ಮತ್ತು ಹಿಂದೆ ಆದರ್ಶ ಗುರು ಇದ್ದಾಗ ಯಾವುದೇ ಕಾರ್ಯ ಯಶಸ್ವಿಯಾಗುತ್ತದೆ. ಪಾದಯಾತ್ರೆಯಲ್ಲಿ ಶ್ರದ್ಧಾ – ಭಕ್ತಿಯಿಂದ ಭಗವಂತನ ನಾಮಸ್ಮರಣೆಯೊಂದಿಗೆ ಕೆಟ್ಟ ಅಭ್ಯಾಸಗಳನ್ನು ಬಿಟ್ಟು ತ್ಯಾಗ ಮನೋಭಾವ ಮತ್ತು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಯುವಜನರು ಹೆಚ್ಚಾಗಿ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಚಲನಚಿತ್ರ ನಿರ್ದೇಶಕ ಶಶಿಕುಮಾರ್, ನಾಗರಾಜ ರೆಡ್ಡಿ, ಕಮಲಾ. ಮೋಹನ ಗೌಡ, ಚಂದ್ರಪ್ಪ, ಹನುಂತರಾಯಪ್ಪ, ನರಸಿಂಹಪ್ಪ ಮತ್ತು ಮರಿಯಪ್ಪ ಅವರನ್ನು ಸನ್ಮಾನಿಸಲಾಯಿತು.ಪಾದಯಾತ್ರಿಗಳ ಕ್ಷೇತ್ರದರ್ಶನ ಸುಗಮವಾಗಲು ಸಹಕರಿಸಿದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಅವರನ್ನು ಪಾದಯಾತ್ರಿಗಳ ಪರವಾಗಿ ಗೌರವಿಸಲಾಯಿತು.

Related posts

ಶ್ರೀ ಧ.ಮಂ.ಅ.ಹಿ ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya
error: Content is protected !!