April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!