37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ನಾಗಾಂಬಿಕ ಸಂಜೀವಿನಿ ಒಕ್ಕೂಟ ಬೆಳಾಲು, ಹಾಗೂ ಸ್ತ್ರೀ ಶಕ್ತಿ ಗೊಂಚಲು ಇದರ ಸಹಯೋಗದಲ್ಲಿ ಮಹಿಳಾ ದಿನಾಚರಣೆಯನ್ನು ಮಾ. 07 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ ಗೌಡ ವಹಿಸಿಕೊಂಡು ಮಹಿಳೆಯರು ಸ್ವಾಲಂಬಿ ಬದುಕು ಕಟ್ಟಿಕೊಂಡು ಸಮಾಜದಲ್ಲಿ ಉತ್ತಮ ಸ್ಥಾನಮಾನವನ್ನು ಗಳಿಸಬೇಕೆಂದು ತಿಳಿಸಿದರು. ಒಕ್ಕೂಟದ ಅಧ್ಯಕ್ಷರಾದ ಮಧುರ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಮುಖ್ಯ ಪುಸ್ತಕ ಬರಹಗಾರರಾದ ಹರಿಣಾಕ್ಷಿ ಇವರು ಒಕ್ಕೂಟದ ವರದಿಯನ್ನು ಮಂಡಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಉಷಾ ಕಾಮತ್ ಸರಕಾರದ ವಿವಿಧ ಯೋಜನೆಗಳನ್ನು ಮಹಿಳೆಯರು ಯಾವ ರೀತಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಇವರು ಎನ್ ಆರ್ ಎಲ್ ಎಂ ಯೋಜನೆಯ ಬಗ್ಗೆ ಹಾಗೂ ಸಂಘಗಳಿಗೆ ಸೇರಿ ಮಹಿಳೆಯರು ಬೇರೆ ಬೇರೆ ಕಾರ್ಯಾಚಟುವಟಿಕೆಗಳಲ್ಲಿ ಸಾಧನೆ ಮಾಡಿರುವ ಬಗ್ಗೆ ತಿಳಿಸಿದರು. ಸ್ತ್ರೀ ಶಕ್ತಿ ಮೇಲ್ವಿಚಾರಕಿಯಾದ ಅನ್ನಪೂರ್ಣ ಇವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು. ಈ ಸಂದರ್ಭದಲ್ಲಿ ಸ್ತ್ರೀಶಕ್ತಿ ಹಾಗೂ ಸಂಜೀವಿನಿ ಸಂಘಗಳಲ್ಲಿ ಹೆಚ್ಚು ಸಾಧನೆ ಮಾಡಿದ ಸಂಘ ಹಾಗೂ ಸದಸ್ಯರನ್ನು ಗುರುತಿಸಿ ಸನ್ಮಾನಿಸಲಾಯಿತು.

ಮಹಿಳೆಯರಿಗೆ ವಿವಿಧ ಮನೋರಂಜನ ಆಟಗಳನ್ನು ಆಯೋಜಿಸಿ ಬಹುಮಾನಗಳನ್ನು ವಿತರಣೆ ಮಾಡಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಗೀತಾ ,ಪಂಚಾಯತ್ ಸದಸ್ಯರು, ಅಭಿವೃದ್ಧಿ ಅಧಿಕಾರಿಗಳಾದ ಲಕ್ಷ್ಮೀಬಾಯಿ , ಒಕ್ಕೂಟದ ಅಧ್ಯಕ್ಷರು ಕಾರ್ಯದರ್ಶಿ ಪದಾಧಿಕಾರಿಗಳು, ಗೊಂಚಲಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಬ್ಲಾಕ್ ಸೊಸೈಟಿ ಅಧ್ಯಕ್ಷೆ ನಿಶಾ, ಎಂಬಿಕೆ ಹರಿಣಾಕ್ಷಿ , ಎಲ್ ಸಿ ಆರ್ ಪಿ ವಾಣಿ, ಸರಸ್ವತಿ , ಕೃಷಿ ಸಖಿ ಸ್ವಾತಿ, ಪಶುಸಖಿ ಯಶೋಧ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯವರು, ಅಂಗನವಾಡಿ ಕಾರ್ಯಕರ್ತೆಯರು, ಸಂಘದ ಸದಸ್ಯರು ಎಂ ಎಸ್ ಡಬ್ಲ್ಯೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಶಾಲಿನಿ ಕಾರ್ಯಕ್ರಮವನ್ನು ನಿರೂಪಿಸಿ, ಲತಾ, ವಿದ್ಯಾ ಭಟ್, ಆಶಾ ಇವರ ಪ್ರಾರ್ಥಸಿ , ಕೃಷಿಸಖಿ ಸ್ವಾತಿ ಸ್ವಾಗತಿಸಿದರು. ಎಲ್ ಸಿ ಆರ್ ಪಿ ಸರಸ್ವತಿ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ನಕ್ಸಲ್ ನಾಯಕ ರೂಪೇಶ್ 3 ದಿನ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕೊಣಾಜೆ ವಲಯದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ

Suddi Udaya

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya
error: Content is protected !!