ಮುಂಡಾಜೆ : ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಪ್ರಕಾರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಸಮಿತಿ, ಮತ್ತು ಗ್ರಾಮ ಪಂಚಾಯಿತಿ ಮುಂಡಾಜೆ ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟ ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು “ಮಹಿಳೆಯರ ದಿನನಿತ್ಯದ ಬದುಕಿನಲ್ಲಿ ಸಾಹಿತ್ಯದ ಪಾತ್ರ” ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಮಾ.7 ರಂದು ಜರುಗಿತು.
ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲೂಕು ಸಮಿತಿಯ ಅಧ್ಯಕ್ಷ ಡಾ| ಮೀನಾಕ್ಷಿ ರಾಮಚಂದ್ರ ಇವರು ಮಹಿಳೆಯರು ತಮ್ಮ ದಿನ ನಿತ್ಯದ ಬದುಕಿನಲ್ಲಿ ಎದುರಿಸುವ ವಿವಿಧ ಸನ್ನಿವೇಶಗಳನ್ನು ಬಳಸಿಕೊಂಡು ಹೇಗೆ ಸಾಹಿತ್ಯವನ್ನು ರಚಿಸಬಹುದು. ಮತ್ತು ಸಾಹಿತ್ಯಕ ವಿಷಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಾವ ಬದುಕು ನಿರುಮ್ಮಳ ವಾಗುತ್ತದೆ ಎಂಬ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಿದರು.
ಮುಖ್ಯ ಅತಿಥಿಯಾಗಿ ಮಹಿಳಾ ಪ್ರಕಾರ,ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಮುಖರಾಗಿರುವ ಶ್ರೀಮತಿ ವಿದ್ಯಾ ಶ್ರೀ ಅಡೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದಂತಹ ಕೆ ಗಣೇಶ್ ಬಂಗೇರ ವಹಿಸಿದ್ದರು. ಮುಂಡಾಜೆ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ನೇತ್ರಾವತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾಗಿರುವಂತಹ ಭವಾನಿ ಶೆಟ್ಟಿಯವರು ಮತ್ತು ಮುಂಡಾಜೆ ಗ್ರಾಮ ಪಂಚಾಯಿತಿನ ಸದಸ್ಯರಾಗಿರುವಂತ ದಿಶಾ ಪಟವರ್ಧನ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸಿತರಿದ್ದ ಎಲ್ಲ ಮಹಿಳೆಯರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರಕಾರದ ಪರವಾಗಿ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಭಾಗವಹಿಸಿದ್ದರು. ಮೊದಲ ಮೂರು ವಿಜೇತರಿಗೆ ಅಭಾಸಪದ ಮಹಿಳಾ ಪ್ರಕಾರದ ಪರವಾಗಿ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ನಿರೂಪಣೆಯನ್ನು ಮಹಿಳಾ ಪ್ರಕಾರದ ಸದಸ್ಯರಾಗಿರುವಂತಹ ರೇಣುಕಾ ಸುಧೀರ್ ನಿರ್ವಹಿಸಿದರು. ದಿಶಾ ಪಟವರ್ಧನ್ ಪ್ರಾರ್ಥನಾ ಶ್ಲೋಕವನ್ನು ಹಾಡಿದರು. ಮೇಘನ ಪ್ರಶಾಂತ್ ಸ್ವಾಗತಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂತೋಷಿನಿ ಕಾರಂತ್ ವಂದಿಸಿದರು.