July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು: 5, 8, 9 ಮತ್ತು 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿ ಸಲ್ಲಿಸಿತ್ತು. ಬುಧವಾರ ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ನ್ಯಾಯಪೀಠ, ಬೋರ್ಡ್ ಪರೀಕ್ಷೆ ರದ್ದುಗೊಳಿಸಿ ತೀರ್ಪು ಪ್ರಕಟಿಸಿತ್ತು.

ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8, 9 ಮತ್ತು 11 ತರಗತಿಯ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಪಡಿಸಿರುವ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ದ್ವಿಸದಸ್ಯ ಪೀಠಕ್ಕೆ ಮೆಲ್ಮನವಿ ಸಲ್ಲಿಸಿತ್ತು. ಗುರುವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಟಿ.ಜೆ.ಶಿವಶಂಕರೇಗೌಡ ಪೀಠದ ಎದುರು ಹೆಚ್ಚುವರಿ ಅಡ್ವಕೇಟ್ ಜನರಲ್ ವಿಕ್ರಮ್ ಹುಯಿಲಗೋಳ್ ಅವರು ಈ ವಿಷಯ ಪ್ರಸ್ತಾಪಿಸಿದ್ದರು.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya
error: Content is protected !!