ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿ

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

ಧರ್ಮಸ್ಥಳ: ನೀನೊಲಿದರೆ ಕೊರಡು ಕೊನರುವುದು, ವಿಷವೂ ಅಮೃತವಾಗುವುದು ಎಂಬಂತೆ ಪರಿಶುದ್ಧ ಮನದಿಂದ ಶಿವರಾತ್ರಿಯ ಶುಭರಾತ್ರಿಯಲ್ಲಿ ಶಿವನಾಮ ಸ್ಮರಣೆ ಮಾಡಿದರೆ ಸಕಲದೋಷಗಳ ಪರಿಹಾರವಾಗುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವನಾಮ ಪಂಚಾಕ್ಷರಿ ಪಠಣಕ್ಕೆ ಚಾಲನೆ ನೀಡಿ ಮಾತನಾಡಿದರು.ನಮ್ಮ ಎಲ್ಲಾ ಮನೋವಿಕಾರಗಳನ್ನು ದೂರಮಾಡಿ ಸಕಲ ಜೀವಿಗಳಿಗೆ ಲೇಸನ್ನೆ ಬಯಸಿ ಉನ್ನತ ಸಾಧನೆ ಮಾಡಬೇಕು. ಶಿವನ ಜೋತೆಗೆ ಶಿವಭಕ್ತರ ಸೇವೆ ಮಾಡಿದರೂ ಪುಣ್ಯ ಬರುತ್ತದೆ ಎಂದು ಅವರು ಹೇಳಿದರು.

ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರು ನೊಂದು ಕಣ್ಣೀರು ಹಾಕಿದರೂ ಅದು ಶಾಪವಾಗಿ ಪರಿಣಮಿಸುತ್ತದೆ. ಹಿತ-ಮಿತ, ಸುಮಧುರ ಮಾತುಗಳನ್ನಾಡಬೇಕು. ಮಾತೇ ಮಾಣಿಕ್ಯ. ಮಾತು ಬಿಡ ಮಂಜುನಾಥ ಎಂಬ ಮಾತನ್ನು ಎಲ್ಲರೂ ಸದಾ ನೆನಪಿಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.ಮನ, ವಚನ, ಕಾಯದಿಂದ ಪರಿಶುದ್ಧ, ದೃಢಸಂಕಲ್ಪ ಮತ್ತು ಪರಿಶುದ್ಧ ಭಕ್ತಿಯಿಂದ ದೇವರ ಅನುಗ್ರಹಕ್ಕೆ ಪಾತ್ರರಾಗಿ ಉನ್ನತ ಸಾಧನೆ ಮಾಡಬಹುದು. ಶಿವರಾತ್ರಿ ಒಂದೇ ರಾತ್ರಿಗೆ ಸೀಮಿತವಾಗದೆ ಪ್ರತಿ ರಾತ್ರಿಯೂ ಶಿವರಾತ್ರಿಯಾಗಿ, ಶುಭರಾತ್ರಿಯಾಗಿ ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿ ನೆಲೆಸಲೆಂದು ಅವರು ಹಾರೈಸಿದರು.

ಹೇಮಾವತಿ ವೀ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್‌ಮ, ಸುಪ್ರಿಯಾ ಹರ್ಷೇಂದ್ರ ಕುಮಾರ್ ಪಾದಯಾತ್ರೆಯ ರೂವಾರಿ ಹನುಮಂತಪ್ಪ ಗುರೂಜಿ, ಮರಿಯಪ್ಪ ಉಪಸ್ಥಿತರಿದ್ದರು.

ಡಾ. ಪವನ್ ಸಂಪಾದಿಸಿದ “ವೈದ್ಯಾಮೃತ” ಕೃತಿಯನ್ನು ಬಿಡುಗಡೆಗೊಳಿಸಲಾಯಿತು.ಬೆಂಗಳೂರಿನ ಭಕ್ತರಿಂದ ಸೇವೆ: ಶಿವರಾತ್ರಿ ಪ್ರಯುಕ್ತ ಬೆಂಗಳೂರಿನ ಹಲವಾರು ಸಂಘಟನೆಗಳು ಸೇರಿ ಶುಕ್ರವಾರ ರಾತ್ರಿ ಭಕ್ತರಿಗೆ ಉಪಾಹಾರ ನೀಡಿದರು.

Related posts

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ

Suddi Udaya

ಪಶ್ಚಿಮ ವಲಯ ಮಟ್ಟದ 8ನೇ ಪೊಲೀಸ್ ಕರ್ತವ್ಯ ಕೂಟ : ಬೆಳ್ತಂಗಡಿ ವೃತ್ತ ನೀರಿಕ್ಷಕ ರವಿ ಬಿಎಸ್, ಹೆಡ್ ಕಾನ್‌ಸ್ಟೇಬಲ್ ವಿಜಯ್ ಕುಮಾರ್, ಪೊಲೀಸ್ ಕಾನ್‌ಸ್ಟೇಬಲ್ ಪ್ರಸನ್ನ, ಮೋಹನ್‌ರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!