ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.