September 6, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ಯುವಕರ ತಂಡದಿಂದ ರಸ್ತೆಯಲ್ಲಿ ಕೀಟಲೆ: ಪ್ರಶ್ನಿಸಿದ ಪೊಲೀಸ್ ಮೇಲೆ ಹಲ್ಲೆ ಆರೋಪ; ಮೂವರ ಬಂಧನ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆಯಲ್ಲಿ ಶಿವರಾತ್ರಿಯ ದಿನ ರಾತ್ರಿಯ ವೇಳೆ ರಸ್ತೆಯಲ್ಲಿ ಕೀಟಲೆ ನಡೆಸುತ್ತಾ ಇದ್ದ‌ ತಂಡವೊಂದನ್ನು ಸೋಡಾ ಬಾಟ್ಲಿಗಳನ್ನು, ಹಾಗೂ ಗ್ಲಾಸ್ ಗಳನ್ನು ರಸ್ತೆಯಲ್ಲಿ ಒಡೆದು ಹಾಕಿದ್ದೀರಿ ಎಂದು ಪ್ರಶ್ನಿಸಿದ ಪೊಲೀಸರ ಮೇಲೆ ತಂಡವೊಂದು ಹಲ್ಲೆಗೆ‌ ಯತ್ನಿಸೀದ ಘಟನೆ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ದ ಹಾಗೂ ಇತರ ಅಪರಿಚಿತರ ವಿರುದ್ದ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹೇಶ್, ಸುರೇಶ್, ಅರುಣ್ ಹಾಗೂ ಇತರರು ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್‌ ಠಾಣೆಯ ಎ.ಎಸ್.ಐ ರಾಮಯ್ಯ ಅವರು ಯುವಕರ ತಂಡ ರಸ್ತೆಯಲ್ಲಿ ಕೀಟಲೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ್ದಾರೆ. ತಡ ರಾತ್ರಿ ವೇಳೆ ರಸ್ತೆಯಲ್ಲಿದ್ದ ಯುವಕರನ್ನು ರಸ್ತೆಯಲ್ಲಿ ಸೋಡಾ ಬಾಟ್ಲಿಗಳನ್ನು ಒಡೆದು ಹಾಕಿರುವ ಬಗ್ಗೆ ರಾಮಯ್ಯ ಅವರು ಪ್ರಶ್ನಿಸಿದ್ದಾರೆ ಇದರಿಂದ ಸಿಟ್ಟುಗೊಂಡ ತಂಡ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ರಾಮಯ್ಯ ಅವರು ನೀಡಿರುವ ದೂರಿನಂತೆ ವೇಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಗುತ್ತಿಗೆದಾರ ನಾಪತ್ತೆಯಾಗಿದ್ದಾರೆ: ರಸ್ತೆ ಬದಿ ಬ್ಯಾನರ್ ಹಾಕಿ ಸಾರ್ವಜನಿಕರ ಆಕ್ರೋಶ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya
error: Content is protected !!