September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಿಯೋನ್ ಆಶ್ರಮ: ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳ ಶಿಬಿರವನ್ನು ಫೆ.29ರಿಂದ ಮಾ.6ರವರೆಗೆ ಹಮ್ಮಿಕೊಳ್ಳಲಾಗಿತ್ತು. ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವುದರೊಂದಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಆಶ್ರಮನಿವಾಸಿಗಳನ್ನು ಮನರಂಜಿಸಿದರು.

ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ರಾಧಾಕೃಷ್ಣ ಹೆಚ್.ಬಿ. ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಪ್ರೋ.ಹರಿಪ್ರಸಾದ್ ಬಿ. ಶೆಟ್ಟಿ, ಯತೀಶ್ ಎಂ. ಶೆಟ್ಟಿ, ಪ್ರವೀಣ್ ಗಟ್ಟಿ ಬಸ್ತಿಕೋಡಿ, ಉದಯಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಡಾ.ಯು.ಸಿ.ಪೌಲೋಸ್, ಆಡಳಿತ ಮಂಡಳಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ. ಮತ್ತು ಸುಭಾಷ್ ಯು.ಪಿ., ಮ್ಯಾನೇಜರ್ ಶ್ರೀಮತಿ ಸಂಧ್ಯಾ ಸುಭಾಷ್, ಕಾಲೇಜಿನ ಪ್ರಾದ್ಯಾಪಕರುಗಳು ಉಪಸ್ಥಿತರಿದ್ದರು. ಶಿಬಿರದ ಮುಂದಾಳತ್ವವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಖಾರಿಗಳಾದ ಡಾ.ಮೇರಿ ಎಂ.ಜೆ. ಹಾಗೂ ಉದಯ್ ಕುಮರ್ ಇವರು ವಹಿಸಿಕೊಂಡಿದ್ದರು.

Related posts

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ಶೈಕ್ಷಣಿಕ ಪ್ರಗತಿ- ಮಿಂಚಿನ ಸಂಚಾರ ಇಲಾಖಾ ತಂಡ ಭೇಟಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಪಡಂಗಡಿ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya
error: Content is protected !!