25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ಕೇಲ್ದಡ್ಕ, ಒಂಜಾರೆ ಮುದ್ದುಂಜ,ಹಾಕೋಟೆ, ಕಲಾಯಿತೊಟ್ಟು,ಕಜೆ, ಕೆಳಗಿನಬೆಟ್ಟು ಮತ್ತು ನಾಳ ಸಮೀಪದ ಪಾಂಡಿಬೆಟ್ಟು ಗ್ರಾಮಸ್ಥರ ಕೃಷಿ ತೋಟಕ್ಕೆ ತಡರಾತ್ರಿ ನುಗ್ಗಿದ ಒಂಟಿಸಲಗದಿಂದ ಬಾಳೆ ಕೃಷಿ ನಾಶವಾಗಿದೆ.

ಗ್ರಾಮಸ್ಥರು ತಡ ರಾತ್ರಿ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ತಕ್ಷಣ ರಾತ್ರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಸ್ಥಳೀಯ ಕೃಷಿಕರ ಜೊತೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹುಡುಕಾಟ ನಡೆಸಿದರೂ ಸುಳಿವು ಸಿಗಲಿಲ್ಲ. ಕೇಲ್ದಡ್ಕ ಉಮೇಶ್ ರವರ ಮನೆ ದನದ ಹಟ್ಟಿಯ ಪಕ್ಕದಲ್ಲಿ ಆನೆ ಬರುವುದನ್ನು ಗಮನಿಸಿದ ಸಾಕು ನಾಯಿ ಕೂಗಿದಾಗ ಒಂಟಿ ಸಲಗ ಗೀಳು (ಕೂಗು) ಶಬ್ದವು ಸಿಸಿ ಕ್ಯಾಮರಾದಲ್ಲಿ ಸೆರೆ ಯಾಗಿದೆ. ಹಾಗೂ ಸ್ವಲ್ಪ ಸಮಯದ ನಂತರ ಪಕ್ಕದ ಮನೆ ನಿವಾಸಿ ರಮಾನಂದ ಪೂಜಾರಿಯವರ ಮನೆಯಂಗಳದಲ್ಲಿ ಕಾಣಿಸಿಕೊಂಡಿದ್ದು,ವಸಂತ ಕುಮಾರ್ ಮತ್ತು ಜನಾರ್ದನ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡಗಳನ್ನು ನಾಶಪಡಿಸಿರುವುದು ಕಂಡುಬರುತ್ತದೆ.ಕಲಾಯಿತೊಟ್ಟು ಗಿರಿಯಪ್ಪ ಗೌಡರ ಮನೆ ಅಂಗಳ ಪಕ್ಕದಲ್ಲಿ ಕಾಣಿಸಿಕೊಂಡು ನಂತರ ಕಜೆ ಕೆಳಗಿನ ಬೆಟ್ಟು ಶ್ರೀಧರ ಪೂಜಾರಿ ಯವರ ಮನೆ ದೈವದ ಕಟ್ಟೆ ಪಕ್ಕದಲ್ಲಿರುವ ಕಬ್ಬು ಗಿಡಗಳನ್ನು ತಿಂದು ಹಾಳು ಕೆಡವಿದೆ. ಹಾಗೂ ನಸುಕಿನಲ್ಲಿ ಪಾಂಡಿಬೆಟ್ಟು ವಿಠ್ಠಲ ಗೌಡರ ತೋಟದ ಬಾಳೆ ಗಿಡಗಳನ್ನು ಮುರಿದು ಹಾಕಿದ ದೃಶ್ಯ ಕಾಣಸಿಗುತ್ತವೆ ಎಂದು ಕೃಷಿಕರು ಹೇಳಿದ್ದರು. ಹಾಗೂ ರಾತ್ರಿ ವೇಳೆಯಲ್ಲಿ ಕೃಷಿಗೆ ನೀರು ಹಾಯಿಸಲು ತೋಟಕ್ಕೆ ಹೋಗಲು ಭಯ ಬೀತರಾಗಿದ್ದು ನೊಂದ ಕೃಷಿಕರ ನಿದ್ದೆ ಗೆಡಿಸಿದೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಅರಣ್ಯ ಇಲಾಖೆ ಸಿಬ್ಬಂದಿಗಳಾದ ಮಡಂತ್ಯಾರು ಉಪವಲಯ ಅರಣ್ಯಾಧಿಕಾರಿ ರಾಜಶೇಖರ, ಗಸ್ತು ಅರಣ್ಯ ರಕ್ಷಕರಾದ ಸತೀಶ್ ಮತ್ತು ಅಕಿಲೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಕೃಷಿಕರಿಗೆ ತೊಂದರೆಯಾಗದಂತೆ ನೀಗ ವಹಿಸಿದರು. ಕೊಯ್ಯೂರು ಗ್ರಾಮದಲ್ಲಿ ಕಳೆದ 2 ದಿನಗಳಿಂದ ಕೊಯ್ಯೂರು ಪರಿಸರದಲ್ಲಿ ರಾತ್ರಿ 2 ಆನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಂಧಲೆ ಮಾಡಿದ ಬಗ್ಗೆ ಕೃಷಿಕರು ಅತಂಕದಲ್ಲಿದ್ದಾರೆ.

Related posts

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya
error: Content is protected !!