39.6 C
ಪುತ್ತೂರು, ಬೆಳ್ತಂಗಡಿ
April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು. ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ತಿನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರುರವರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ವರರವರು ವಂದಿಸಿದರು.

Related posts

ಕಲ್ಮಂಜ: ಪುರುಷೋತ್ತಮ ನಾಯ್ಕ ರವರ ಮನೆಯಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪತ್ತೆ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.172 ಕೋಟಿ ವ್ಯವಹಾರ, ರೂ. 87 ಲಕ್ಷ ಲಾಭ, ಶೇ.4 ಡಿವಿಡೆಂಡ್

Suddi Udaya

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಭೋಜರಾಜ ಶೆಟ್ಟಿ ಪಿಲ್ಯ ನಿಧನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಸಾಮಾಜಿಕ ಜಾಲತಾಣ ನೂತನ ಸಂಚಾಲಕರಾಗಿ ಜಯಂತ್ ಜಾನು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ