April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಉಸ್ತುವಾರಿ ಸಚಿವರಿಂದ138 ಫಲಾನುಭವಿಗಳಿಗೆ 94ಸಿ ಮತ್ತು ‌94 ಸಿಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕನಾ೯ಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 138 ಫಲಾನುಭವಿಗಳಿಗೆ 94ಸಿ ಮತ್ತು 94 ಸಿಸಿ ಹಕ್ಕು ವಿತರಣೆ ಸಮಾರಂಭ ಮಾ. 10 ರಂದು ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ನಡೆಯಿತು.

ದ.ಕ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಬಡ ಕುಟುಂಬಗಳಿಗೆ ಹೆಚ್ಚಿನ ಅನುಕೂಲ ಒದಗಿಸಿದೆ ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್, ಮಂಜುನಾಥ್ ಭಂಡಾರಿ, ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ನಿಗಮ ಅಧ್ಯಕ್ಷ ಮಮತಾ ಗಟ್ಟಿ ಉಪಸ್ಥಿತರಿದ್ದರು. ಉಪ ತಹಶೀಲ್ದಾರ್ ರವಿಕುಮಾರ್ ನಾಡಗೀತೆ ಹಾಡಿದರು. ಹೇಮಾ ಕಾಯ೯ಕ್ರಮ ನಿರೂಪಿಸಿದರು. ಕಂದಾಯ ನಿರೀಕ್ಷಕ ಪವಾಡಪ್ಪ ಧನ್ಯವಾದ ಅರ್ಪಿಸಿದರು.

Related posts

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಗುರುವಾಯನಕೆರೆ: ಶ್ರೀ ಭ್ರಾಮರಿ ಕುಣಿತ ಭಜನಾ ತಂಡದ ಎರಡನೇ ವರ್ಷದ ‘ಭಕ್ತಿಹೆಜ್ಜೆ’ ಕಾರ್ಯಕ್ರಮ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಪೇರಲ್ದರಕಟ್ಟೆ ಜುಮಾ ಮಸೀದಿಯಲ್ಲಿ ರಮೇಶ್ ಗಿಂಡಾಡಿ ವತಿಯಿಂದ ಸೌಹಾರ್ದ ಇಫ್ತಾರ್ ಮೀಟ್

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya
error: Content is protected !!