April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಬೆಳ್ತಂಗಡಿ ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ ವರ್ತಕರ ಹಾಗೂ ಕಟ್ಟಡ ಮಾಲಿಕರ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಜನಸಂಪರ್ಕ ಕಾರ್ಯಕ್ರಮ ಮಾ.10 ರಂದು ನಡೆಯಿತು.

ವರ್ತಕರು ಸೇರಿದಂತೆ ಸಾರ್ವಜನಿಕರು ದೂಳಿನಿಂದಾಗಿ ಸಂಚರಿಸಲು ಕಷ್ಟವಾಗುತ್ತಿದೆ. ಗುತ್ತಿಗೆದಾರರಲ್ಲಿ ನೀರುಹಾಕುವಂತೆ ಸೂಚಿಸಿದರೂ ಸ್ಪಂದಿಸುತ್ತಿಲ್ಲ ದಯವಿಟ್ಟುದೂಳಿನಿಂದ ಮುಕ್ತಿ ನೀಡಿ ಎಂದು ಶಾಸಕರಲ್ಲಿ ಹೇಳಿದಾಗ ಶಾಸಕರು ಅಧಿಕಾರಿಗಳನ್ನು ಸೇರಿದಂತೆ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರಲ್ಲದೇ ದಿನಂಪ್ರತಿ ಮೂರು ಹೊತ್ತುದೂಳು ಏಳದಂತೆ ನೀರು ಸಿಂಪಡಿಸಬೇಕು ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಸೂಚಿಸಿದರು.ಒಂದು ವೇಳೆ ನೀರು ಹಾಕದಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಶಾಸಕರು ಸಾರ್ವಜನಿಕರಿಗೆ ತಿಳಿಸಿದರು.ಮಳೆಗಾಲದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಕ್ರಮಕೈಗೊಳ್ಳಬೇಕು, ರಸ್ತೆಗಾಗಿ ವಶಪಡಿಸಿಕೊಳ್ಳಬೇಕಾದ ಜಾಗದ ಬಗ್ಗೆ ಇನ್ನೂ ಸರಿಯಾದ ಮಾಹಿತಿ ನೀಡಲಾಗಿಲ್ಲ ಅದನ್ನು ಕೂಡಲೇ ನೀಡಬೇಕು ಎಂದು ಜನರು ಆಗ್ರಹಿಸಿದರು.

ಈಬಗ್ಗೆ ಪೂರ್ಣ ಮಾಹಿತಿ ನೀಡುವುದಾಗಿ ಅಧಿಕಾರಿಗಳು ತಿಳಿಸಿದರು.ವಾಣಿ ಕಾಲೇಜು ಬಳಿ ತಡೆಗೋಡೆ ನಿರ್ಮಾಣ ಮಾಡಬೇಕು, ಶಾಲೆಗಳು ಇರುವ ಸ್ಥಳಗಳಲ್ಲಿ ಮಕ್ಕಳು ರಸ್ತೆ ದಾಟಲು ಕಷ್ಟವಾಗುತ್ತಿದೆ ಇದಕ್ಕಾಗಿ ಪ್ಲೈಓವರ್ ನಿರ್ಮಾಣ ಮಾಡಬೇಕು, ಹೆದ್ದಾರಿ ಕಾಮಗಾರಿ ಮುಗಿದರೆ ಇನ್ನಷ್ಟು ಸಮಸ್ಯೆ ಆಗಲಿದೆ ಆದ್ದರಿಂದ ರಸ್ತೆ ದಾಟಲು ಅಲ್ಲಲ್ಲಿ ಅಗತ್ಯ ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯವೂ ಕೇಳಿ ಬಂತು. ಸಭೆಯಲ್ಲಿ ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ , ಕಾಯ೯ದಶಿ೯ ರೊನಾಲ್ಡ್ ಲೋಬೊ, ನಗರ ಪಂಚಾಯತ್ ಸದಸ್ಯರಾದ ಜಗದೀಶ್. ಮಾಜಿ ಉಪಾದ್ಯಕ್ಷರಾದ ಹಾಲಿ ಸದಸ್ಯರು ಜಯನಂದ ಗೌಡ. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಶಿವಪ್ರಸಾದ ಅಜಿಲ, ಕಟ್ಟಡದ ಮಾಲೀಕರು. ಅಂಗಡಿ ಮಾಲೀಕರು, ವತ೯ಕರ ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಅಧಿಕಾರಿಗಳು ಇದ್ದರು

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya

ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆ: ನಾವೂರಿನಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya
error: Content is protected !!