ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ಜಾಗೃತಿ ಮಾಹಿತಿ ಕಾರ್ಯಕ್ರಮ ಜರಗಿತು. ಮಾಹಿತಿ ನೀಡಲು ಆಗಮಿಸಿದ ಸಂಪನ್ಮೂಲ ವ್ಯಕ್ತಿಗಳಾದ ಶಿಕ್ಷಕ ಯೋಗಿಶ್ ಮಾಯರವರು ಮಾತನಾಡುತ್ತಾ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವೆಂಬುದು ಜನತೆಗೆ ನೀಡಿದ ಹಕ್ಕು. ಈ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮ ಆಯ್ಕೆ ಹಾಗೂ ಸದೃಢ ಸಮಾಜ ನಿರ್ಮಾಣ ಮಾಡುವುದರಲ್ಲಿ ಜನ ಜಾಗೃತರಾಗಬೇಕು. ವಿದ್ಯಾರ್ಥಿಗಳು ಭವಿಷ್ಯದ ಪ್ರಜೆಗಳು. ಈ ಬಗ್ಗೆ ತಿಳುವಳಿಕೆಯನ್ನು ಪಡೆಯುವ ಮೂಲಕ ಜಾಗೃತ ನಾಗರಿಕರಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬೆಳಾಲು ಗ್ರಾಮ ಪಂಚಾಯತ್ತಿನ ವಾಚನಾಲಯದ ಅಧಿಕಾರಿ ಡೀಕಯ್ಯ ಗೌಡ ಅರಣೆಮಾರುರವರು ಮತ್ತು ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಿಸಿದ ಶಿಕ್ಷಕರಾದ ಸುಮನ್ ಯು ಎಸ್ ರವರು ಸ್ವಾಗತಿಸಿ, ಶಿಕ್ಷಕ ಗಣೇಶ್ವರರವರು ವಂದಿಸಿದರು.

Leave a Comment

error: Content is protected !!