September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ಧೂಳಿನಿಂದ ಆಗುತ್ತಿರುವ ಸಮಸ್ಯೆ ಬಗ್ಗೆ ಸಾರ್ವಜನಿಕರು ರಸ್ತೆ ಬದಿಯಲ್ಲಿ ಪ್ರತಿಭಟನಾ ರೀತಿಯಲ್ಲಿ ಸೂಚನಾ ಫಲಕ ಅಳವಡಿಸಿ, ಅಸಮಾಧಾನ ಹೊರಹಾಕಿದ್ದಾರೆ.

ಇಂದು ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಬೆಳ್ತಂಗಡಿ ನಗರದಲ್ಲಿ ಹಾದು ಹೋಗುವ ರಸ್ತೆಗಳ ಬಗ್ಗೆ ವರ್ತಕರ ಹಾಗೂ ಕಟ್ಟಡ ಮಾಲಿಕರ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲು ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳು, ಗುತ್ತಿಗೆದಾರರು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಜನಸಂಪರ್ಕ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ನಾಮ ಫಲಕಗಳು ಗಮನ ಸೆಳೆಯಿತು.

ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ಎಂಬ ಹಲವಾರು ಫಲಕಗಳು ರಸ್ತೆಯುದ್ದಕ್ಕೂ ಅಳವಡಿಸಲಾಗಿದೆ.ಕಳೆದ ಕೆಲವು ಸಮಯಗಳಿಂದ ನಾಗಪುರ ಮೂಲದ ಗುತ್ತಿಗೆದಾರರು ಹೆದ್ದಾರಿ ಕಾಮಗಾರಿ ನಡೆಸುತಿದ್ದು, ದೂಳಿನಿಂದಾಗಿ ರಸ್ತೆಯಲ್ಲಿ ಸಂಚಾರ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನ ದಟ್ಟಣೆ ಹೆಚ್ಚಾಗಿರುವ ಈ ರಸ್ತೆಯಲ್ಲಿ ದೂಳಿನಿಂದಾಗಿ ದ್ವಿಚಕ್ರ ಸೇರಿದಂತೆ ಇತರ ವಾಹನ ಸಂಚರಿಸಲು ಹರ ಸಾಹಸ ಪಡುವಂತಾಗಿದೆ ಸಾರ್ವಜನಿಕರು,ವಿದ್ಯಾರ್ಥಿಗಳು ದೂಳಿನಿಂದಾಗಿ ಸಮಸ್ಯೆ ಎದುರಿಸುತ್ತಿದ್ದಾರೆ.

ಸಾರ್ವಜನಿಕರು ಈ ಸಮಸ್ಯೆಗಳನ್ನು ಯಾರಲ್ಲಿ ಹೇಳಿಕೊಳ್ಳುವುದು ಎಂದು ತಿಳಿಯದೇ ಇಂದು ಶಾಸಕರು, ಅಧಿಕಾರಿಗಳು ಹೆದ್ದಾರಿಯ‌ ಕೆಲವು ಕಡೆಗಳಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ರಸ್ತೆ ಬದಿಯಲ್ಲಿ ಫಲಕಗಳನ್ನು ಅಳವಡಿಸಿ ಸಂಬಂಧ ಪಟ್ಟವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ.

Related posts

ವೇಣೂರು: ಪಿಲಿಯೂರು ನಿವಾಸಿ ಸುರೇಶ್ ಗೋರೆ ನಿಧನ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಅಳದಂಗಡಿ ನೂರುಲ್ ಇಸ್ಲಾಂ ಮದರಸದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya
error: Content is protected !!