ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗ ಸೇವಾ ಸಂಘ ಹಳೆಕೋಟೆ ಬೆಳ್ತಂಗಡಿ ಮತ್ತು ಯುವ ವೇದಿಕೆ ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಾ.10ರಂದು ವಾಣಿ ಶಿಕ್ಷಣ ಸಂಸ್ಥೆ ಸಭಾಂಗಣದಲ್ಲಿ ನಡೆಯಿತು.
ಉದ್ಘಾಟನೆಯನ್ನು ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ಉಮಾ.ಡಿ.ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷರಾದ ಗೀತಾ ರಾಮಣ್ಣ ಗೌಡ ವಹಿಸಿಕೊಂಡರು.
ಮುಖ್ಯ ಅತಿಥಿಗಳಾಗಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ನಿರ್ದೇಶಕಿ ಉಷಾ ವೆಂಕಟರಮಣ ಗೌಡ, ಬೆಳ್ತಂಗಡಿ ತಾಲೂಕು ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ, ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ನೆಹರು ಸ್ಮಾರಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಅನುರಾಧ ಕುರುಂಜಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾರತ ಸೌಟ್ಸ್&ಗೈಡ್ಸ್(ಬುಲ್ ಬುಲ್) ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮುಂಡಾಜೆ ದಿನೇಶ್ ಮತ್ತು ಉಷಾ ದಂಪತಿ ಪುತ್ರಿ ಬೇಬಿ ದ್ವಿಶಾ ಯು.ಡಿ ಇವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಮಹಿಳಾ ವೇದಿಕೆಯ ಗೌರವಾಧ್ಯಕ್ಷರಾದ ಶುಭಾಷಿಣಿ ಜನಾರ್ದನ ಗೌಡ, ತಾಲೂಕು ಮಹಿಳಾ ವೇದಿಕೆಯ ಕಾರ್ಯದರ್ಶಿ ಲೀಲಾ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಗೌಡರ ಯಾನೆ ಒಕ್ಕಳಿಗ ಸೇವಾ ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು.