ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದರು.
ಮಹಿಳೆಯರು ಸಮಾಜದಲ್ಲಿ ಯಾವ ರೀತಿ ಇರಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಅವರು ವಿವರಿಸಿದರು. ಹೆಣ್ಣು ಮಕ್ಕಳಿಗೆ ವಿದ್ಯಾಬ್ಯಾಸದ ಆವಶ್ಯಕತೆ, ವೃತ್ತಿ, ಹೂಡಿಕೆ ಮುಂತಾದ ವಿಷಯಗಳ ಕುರಿತು ತಿಳಿಸಿದರು.
ಸರಕಾರದಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಆಶಿಕಾ ಕಾರ್ಯಕ್ರಮ ನಿರೂಪಿಸಿದರು.