26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

ಉಜಿರೆ: ಪ್ರೊ. ಎನ್. ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ
ಸೇವೆ ಸಲ್ಲಿಸಿದ್ದರು. ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ
ಬರಹಗಳ ಮೂಲಕವೂ ಗುರುತಿಸಿಕೊಂಡವರು. ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.
ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ
ಪುರಸ್ಕೃತಗೊಂಡಿದ್ದರು.

ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ. ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ. ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿರುವರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ದ.ಕ.ಜಿ.ಪಂ.ಹಿ. ಪ್ರಾ. ಕೊಡಿಯಾಲಬೈಲು ಶಾಲೆಯಲ್ಲಿ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya
error: Content is protected !!