April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ (ಬಾಂಬೆ ಮಿಠಾಯಿ) ಯನ್ನು ನಿಷೇಧಿಸಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ, ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೆ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಜನ ಇತ್ತೀಚೆಗೆ ಬೀದಿ ಬದಿಯಲ್ಲಿ ಆಹಾರ ಸೇವನೆ‌ ಮಾಡ್ತಿರೋದು ಜಾಸ್ತಿಯಾಗ್ತಿದೆ. ಈ ಆಹಾರದಿಂದ ದುಷ್ಪರಿಣಾಮ ಇದೆ ಅನ್ನೋದು ಗೊತ್ತಿದೆ. ಹೆಚ್ಚು ಉಪ್ಪಿನಾಂಶ, ಕೊಬ್ಬಿನಾಂಶ ಇರೋದು ತಿಳಿದುಬಂದಿದೆ. ಜೊತೆಗೆ, ರಾಸಾಯನಿಕ ವಸ್ತುಗಳನ್ನು ಮಿಶ್ರಣ ಮಾಡಿರುವುದು ಕೂಡ ಪತ್ತೆಯಾಗಿದೆ.ಇದು ಆರೋಗ್ಯಕ್ಕೆ ಹಾನಿಕಾರಕ. ಹಾನಿಕಾರಕ ಆಹಾರದ ಬಗ್ಗೆ ಪುಡ್ ಇಲಾಖೆ ಜೊತೆ ಸರ್ವೆ ಮಾಡಲಾಗಿದೆ. ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ಸ್ಯಾಂಪಲ್ ಕಲೆಕ್ಟ್ ಮಾಡಲಾಯ್ತು. ರಾಜ್ಯದ ವಿವಿಧ ರೆಸ್ಟೋರೆಂಟ್ ಹಾಗೂ ಹೋಟೆಲ್ ಗಳಲ್ಲಿ 71 ಕಡೆಗಳಿಂದ ಕಾಟನ್ ಕ್ಯಾಂಡಿ ಹಾಗೂ 25 ಕಡೆಗಳಿಂದ ಗೋಬಿ ಮಂಚೂರಿ ಸ್ಯಾಂಪಲ್ ಸಂಗ್ರಹ ಮಾಡಲಾಯಿತು. ಸಂಗ್ರಹಿಸಲಾದ 25 ಮಾದರಿಗಳಲ್ಲಿ ಬರೋಬ್ಬರಿ 15 ಮಾದರಿಗಳಲ್ಲಿ ಕೃತಕ ಹಾಗೂ ಹಾನಿಕಾರಕ ಬಣ್ಣ ಮಿಶ್ರಣ ಮಾಡಿರುವುದು ಪತ್ತೆಯಾಗಿದೆ ಎಂದು ತಿಳಿಸಿದರು.

ಕಾಟನ್ ಕ್ಯಾಂಡಿ ಟಾರ್ ಟ್ರಾಸೈನ್, ಸನ್ ಸೆಟ್ ಯೆಲ್ಲೋ ಹಾಗೂ ರೋಡಮೈನ್-ಬಿ ಅಂಶ ಪತ್ತೆಯಾಗಿದೆ. ಇದರಲ್ಲಿ ರೋಡಮೈನ್-ಬಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ, ಕಾಟನ್ ಕ್ಯಾಂಡಿ ಮಾರಾಟ ನಿಷೇಧಿಸಲಾಗುತ್ತಿದೆ. ಇನ್ನು ಗೋಬಿ ಮಂಚೂರಿಯಲ್ಲಿ ಟಾರ್ ಟ್ರಾಸೈನ್, ಸನ್ ಸೆಟ್ ಯೆಲ್ಲೋ ಹಾಗೂ ಕಾರ್ಮೊಸಿನ್ ಅಂಶ ಪತ್ತೆಯಾಗಿದೆ. ಆದರೆ, ಗೋಬಿ ಮಂಚೂರಿ ಮಾರಾಟವನ್ನು‌ ಬ್ಯಾನ್ ಮಾಡುವುದಿಲ್ಲ. ಇದಕ್ಕೆ ಕೃತಕ ಬಣ್ಣ ಮಿಶ್ರಣ ಮಾಡುವಂತಿಲ್ಲ. ಒಂದು ವೇಳೆ ಬಣ್ಣ ಬೆರಕೆ ಮಾಡಿದರೆ 10 ಲಕ್ಷ ರೂ. ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಇನ್ನುಮುಂದೆ ರೊಡೊಮೈನ್ ಬಿ, ಟಾರ್ ಟ್ರಾಸೈನ್ ಅನ್ನು ಯಾವುದೇ ಆಹಾರ ಪದಾರ್ಥಗಳಲ್ಲಿ ಬಳಸುವಂತಿಲ್ಲ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರವಾಗಿದ್ದು, ಪಿಂಕ್ ಕಲರ್ ಬರಲು ರೋಡಮೈನ್-ಬಿ ಬಳಸುತ್ತಾರೆ. ಒಂದು ವೇಳೆ ತೀರಾ ಅಗತ್ಯವಿದ್ದಲ್ಲಿ ಲೀಗಲ್ ಸ್ಯಾಂಪಲ್ ಪಡೆಯಬೇಕು. ಇನ್ನುಮುಂದೆ ಕಾಟನ್ ಕ್ಯಾಂಡಿಯಲ್ಲಿ ಪಿಂಕ್ ಕಲರ್ ಬರಲು ಕೃತಕ ಬಣ್ಣ ಬೆರಕೆ ಮಾಡೋದು ಕಾನೂನು ಬಾಹಿರವಾಗಿದೆ. ಈ ನಿಯಮ ಉಲ್ಲಂಘಿಸಿದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರಡಿ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Related posts

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!