22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಗೃಹವಿಜ್ಞಾನ ವಿಭಾಗ ಮುಖ್ಯಸ್ಥೆ ಶೋಭಾ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿದ್ದರು.

ಮಹಿಳೆಯರು ಸಮಾಜದಲ್ಲಿ ಯಾವ ರೀತಿ ಇರಬೇಕು, ಸಮಾಜದಲ್ಲಿ ಗೌರವಯುತವಾಗಿ ಬಾಳಲು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಅವರು ವಿವರಿಸಿದರು. ಹೆಣ್ಣು ಮಕ್ಕಳಿಗೆ ವಿದ್ಯಾಬ್ಯಾಸದ ಆವಶ್ಯಕತೆ, ವೃತ್ತಿ, ಹೂಡಿಕೆ ಮುಂತಾದ ವಿಷಯಗಳ ಕುರಿತು ತಿಳಿಸಿದರು.


ಸರಕಾರದಿಂದ ಮಹಿಳೆಯರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು. ಆಶಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು: ಶ್ರೀ ರಾಮ ನಗರ ಹಾರಬೆ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ: ಗಣಹೋಮ, ನಾಗ ದೇವರಿಗೆ ನಾಗ ತಂಬಿಲ ಸೇವೆ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಜು.1ರಿಂದ ಪದ್ಯಾಣ ಭಾಗವತ ಸಂಸ್ಮರಣೆ, ತಾಳಮದ್ದಳೆ ಸಪ್ತಾಹ: ಭಾಗವತ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪದ್ಯಾಣ ಪ್ರಶಸ್ತಿ ಹಾಗೂ ಹಿಮ್ಮೇಳ ವಾದಕ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ಪ್ರಶಸ್ತಿ,

Suddi Udaya
error: Content is protected !!